ಗೌರಿಬಿದನೂರು: ತಾಲೂಕಿನ ದ್ಯಾವಪ್ಪನ ಕೆರೆ ಬಳಿ ಮಿನಿ ಡ್ಯಾಂ ನಿರ್ಮಿಸಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ರೈತ ಸಂ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಆಶ್ರಯಲ್ಲಿ ಸೆ.10 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10ಕ್ಕೆ ಅಲಕಾಪುರ ಗೇಟ್ನಿಂದ ತಾಲೂಕು ಕಚೇರಿಯವರಿಗೆ ಬೈಕ್ ರ್ಯಾಲಿ ನಡೆಸಲಾಗುವುದು. ಬಳಿಕ ಮಿನಿ ಡ್ಯಾಂ ನಿರ್ಮಾಣ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ತಾಲೂಕು ಕಚೇರಿ ಮುಂದೆ ಪ್ರತಿಭಟಿಸಲಾಗುವುದು.