ಎನ್‌ಟಿಎಂ ಶಾಲೆ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ

protest
Published on

ಮೈಸೂರು: ಎನ್‌ಟಿಎಂ ಶಾಲೆ ಪುನರ್ ನಿರ್ಮಾಣಕ್ಕೆ ಆಗ್ರಹಿಸಿ ಎನ್‌ಟಿಎಂ ಶಾಲೆ ಉಳಿಸಿ ಹೋರಾಟ ಒಕ್ಕೂಟದಿಂದ ನಗರದ ಸ್ವಾತಂತ್ರೃ ಹೋರಾಟ ಗಾರರ ಉದ್ಯಾನದಲ್ಲಿ ಪ್ರತಿಭಟನೆ ನಡೆಯಿತು.

ಶಾಲೆಯನ್ನು ಕೆಡವಿ ಇದೀಗ ಆ ಜಾಗದಲ್ಲಿ ವಿವೇಕ ಸ್ಮಾರಕ ನಿರ್ಮಾಣ ಮಾಡಲಾಗಿದೆ. ಶಾಲೆಯನ್ನು ಕೆಡವುವ ಮುನ್ನ ವಿವೇಕ ಸ್ಮಾರಕದ ಜತೆಗೆ ಶಾಲೆಯನ್ನೂ ನಿರ್ಮಾಣ ಮಾಡಲಾಗುವುದು ಎಂದು ರಾಮಕೃಷ್ಣ ಆಶ್ರಮ ಭರವಸೆ ನೀಡಿತ್ತು. ಕೊಟ್ಟ ಮಾತಿನಂತೆ ಶಾಲೆಯನ್ನು ಪುನರ್ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಎಂ.ಮೋಹನ್ ಕುಮಾರ್ ಗೌಡ, ಸುನಿಲ್ ಕುಮಾರ್, ಟಿ. ರವಿಗೌಡ, ಪುರುಷೋತ್ತಮ್, ಸ್ವಾಮಿ ಸಿದ್ದೇಗೌಡ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net