ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಕೆ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ

Protest demanding filling of vacant posts by submitting a petition to the state government through the District Collector
Published on

ವಿಜಯಪುರ:ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ಉದ್ಯೋಗದ ವಯೋಮಿತಿ ಸಡಲಿಕೆಗೊಳಿಸುವಂತೆ ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್​ ನೇತೃತ್ವದಲ್ಲಿ ಮಂಗಳವಾರ ಯುವಕರು ಪ್ರತಿಭಟನಾ ಮೆರವಣಿಗೆ ನಡೆಸಿದರು.ನಗರದ ಗಾಂಧಿ ವೃತ್ತದಲ್ಲಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ಧ ೂಷಣೆ ಮೊಳಗಿಸಿದರಲ್ಲದೆ, ಮೆರವಣಿಗೆಯಲ್ಲಿ ಅಂಬೇಡ್ಕರ್​ ವೃತ್ತಕ್ಕೆ ತೆರಳಿ ಸಮಾವೇಶಗೊಂಡಿತು. ಅಪರ ಜಿಲ್ಲಾಧಿಕಾರಿ ಸೋಮನಿಂಗ ಗೆಣ್ಣೂರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತು.

ಡಿವಿಪಿ ಸಂಟನೆ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಿ, ರಾಜ್ಯದೆಲ್ಲೆಡೆ ವಿದ್ಯಾರ್ಥಿಗಳು, ಯುವಜನರ ನಿರುದ್ಯೋಗದ ಸಮಸ್ಯೆ ತೀವ್ರವಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಸೇರಿ ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್​ ಸರ್ಕಾರ ಅವಧಿಯಲ್ಲಿಯೂ ನಾಲ್ಕು ವರ್ಷದಿಂದ ಯಾವುದೇ ಸರ್ಕಾರಿ ಹುದ್ದೆ ಭರ್ತಿ ಮಾಡಿಲ್ಲ. ಯುವಜನತೆ ಸರ್ಕಾರಿ ಕೆಲಸ ಪಡೆಯಬೇಕೆನ್ನುವ ಉದ್ದೇಶದಿಂದ ಹಗಲು ರಾತ್ರಿ ಕಷ್ಟಪಟ್ಟು ಶ್ರಮ ಹಾಕುತ್ತಿದ್ದರೂ ಸರ್ಕಾರ ಅವರ ಕಷ್ಕಕ್ಕೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಡಿವಿಪಿ ಜಿಲ್ಲಾ ಸಂಚಾಲಕ ಅಕ್ಷಯಕುಮಾರ ಅಜಮನಿ ಮಾತನಾಡಿ, ದಲಿತ ವಿದ್ಯಾರ್ಥಿ ಪರಿಷತ್​ನಿಂದ ನಿರುದ್ಯೋಗಿ ಯುವಕರ ಪರ ಎರಡು ವರ್ಷದಿಂದ ಹೋರಾಟ ಮಾಡುತ್ತಿದೆ. ಆದರೆ, ಆಳುವ ಸರ್ಕಾರಗಳು ನಮ್ಮ ಕಷ್ಟ ಅರ್ಥಮಾಡಿಕೊಳ್ಳದೆ ಇವತ್ತು ಬೀದಿಯಲ್ಲಿ ನಿಲ್ಲುವಂತೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸಂವಿಧಾನ ಎಲ್ಲರಿಗೂ ಸಮಾನತೆಯ ಅವಕಾಶ ಕಲ್ಪಿಸಿದೆ. ಆದರೆ, ಯುವಕರಿಗೆ ಉದ್ಯೋಗದ ಅವಕಾಶಗಳು ಸಿಗದೆ ಬಾಳಿಗೆ ಕುತ್ತು ತರುವ ಕೆಲಸವನ್ನು ಇಂದಿನ ಸರ್ಕಾರಗಳು ಮಾಡುತ್ತಿವೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.ಮುಖಂಡರಾದ ಹುಚ್ಚಪ್ಪ ಸಿಂದಗಿ, ಮಂಜುನಾಥ, ಮಾದೇಶ ಚಲವಾದಿ, ಪ್ರತಾಪ ತೋಳನೂರ, ಪ್ರಶಾಂತ ದಾಂಡೇಕರ, ರಾಹುಲ್​ ಕಳಸದ, ಯಮನೂರಿ ಮಾದರ, ಶಿಲ್ಪಾ ಮತ್ತಿತರರಿದ್ದರು. ಪ್ರತಿಭಟನೆಯಿಂದಾಗಿ ಸಾರ್ವಜನಿಕರು ಟ್ರಾಫಿಕ್​ ಕಿರಿ ಕಿರಿ ಅನುಭವಿಸಬೇಕಾಯಿತು.

ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್​ ನೇತೃತ್ವದಲ್ಲಿ ವಿಜಯಪುರದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಯುವಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net