ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ

alme 27-2 manaiv
ವಿವಿಧ ಭೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ತಾಲೂಕ ಘಟಕದಿಂದ ಧರಣಿ ನಡೆಸಿ ಆಲಮೇಲ ಪಪಂ ಅಧ್ಯಕ್ಷ ಸಾಧಿಕ್ ಸುಂಬಡಗೆ ಅವರಿಗೆ ಮನವಿ ಸಲ್ಲಿಸಲಾಯಿತು. ತಾಲೂಕು ಘಟಕದ ಅಧ್ಯಕ್ಷ ಲಾಲ್‌ಸಾಬ ದೇವರಮನಿ, ಉಪಾಧ್ಯಕ್ಷೆ ರೇಣುಕಾ ಯಂಟಮನ, ಬಿ.ಜಿ. ನಾರಾಯಣಕರ ಹಾಗೂ ಪೌರ ಕಾರ್ಮಿಕರು ಇದ್ದರು.
Published on

ಆಲಮೇಲ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮಂಗಳವಾರ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ತಾಲೂಕು ಘಟಕದಿಂದ ಧರಣಿ ನಡೆಸಿ ಪಪಂ ಅಧ್ಯಕ್ಷ ಸಾಧಿಕ್ ಸುಂಬಡಗೆ ಮನವಿ ಸಲ್ಲಿಸಲಾಯಿತು.

ತಾಲೂಕು ಘಟಕದ ಅಧ್ಯಕ್ಷ ಲಾಲಸಾಬ ದೇವರಮನಿ ಮಾತನಾಡಿ, ಕರ್ನಾಟಕ ನಾಗರಿಕ ಸೇವಾ ನಿಯಮ ಅಧಿನಿಯಮ 1978 ರನ್ನು ಕರ್ನಾಟಕ ಪೌರ ಸೇವಾ ನೌಕರರಿಗೆ ಅನ್ವಯಿಸುವುದು ಹಾಗೂ ಪಂಚಾಯತ್‌ರಾಜ್ ಇಲಾಖೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿರುವ ಮಾದರಿಯಲ್ಲೇ ರಾಜ್ಯದ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಜಿಪಿಎ್, ಕೆಜೆಐಡಿ, ಜ್ಯೋತಿ ಸಂಜೀವಿನಿ ಸೇರಿ ಸರ್ಕಾರಿ ನೌಕರರು ಪಡೆಯುವ ಎಲ್ಲ ಸೌಲಭ್ಯಗಳನ್ನು ವಿಸ್ತರಿಸುವ ಬಗ್ಗೆ ಶಾಸನ ಸಭೆಯಲ್ಲಿ ಕಾಯ್ದೆ ನಿಯಮಗಳಿಗೆ ತಿದ್ದುಪಡಿ ಮಾಡಿ ಯಥಾವತ್ತಾಗಿ ಪೌರಸೇವಾ ನೌಕರರಿಗೆ ಜಾರಿ ಮಾಡಬೇಕು. ಹೊರಗುತ್ತಿಗೆ ಆಧಾರದ ಮೇಲೆ ನೀರು ಸರಬರಾಜು ಸಹಾಯಕರು, ವಾಹನ ಚಾಲಕರು, ಬೀದಿ ದೀಪ ಸಹಾಯಕ, ಲೋಡರ್ಸ್, ಪಾರ್ಕ್, ಗಾರ್ಡನರ್, ಕಾವಲುಗಾರ ಸ್ಯಾನಿಟರಿ ಸೂಪರ್‌ವೈಜರ್ ಸೇರಿ ವಿವಿಧ ವೃಂದಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ತಾಲೂಕು ಘಟಕದ ಉಪಾಧ್ಯಕ್ಷೆ ರೇಣುಕಾ ಯಂಟಮನ, ಬಿ.ಜಿ. ನಾರಾಯಣಕರ, ಲಕ್ಷ್ಮೀಂಬಾಯಿ ಬಿಳಂಬಗಿ, ಮಾಲಾಶ್ರೀ ತಳವಾರ, ಸುರೇಶ ಈಟಿ, ಶಿವಪ್ಪ ಭೋವಿ, ಯುವರಾಜ ರಜಪೂತ, ಬಸವರಾಜ ಜಗತಿ, ಗಂಗಾರಾಮ ರಜಪೂತ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net