ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
Published on

ಮಳವಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ವಿವಿಧ ಕಾರ್ಮಿಕ ಸಂಘಟನೆಗಳಿಂದ ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.

ಪಟ್ಟಣದ ತಾಲೂಕು ಪಂಚಾಯಿತಿ ಬಳಿ ಜಮಾವಣೆಗೊಂಡ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಅನಂತ ರಾಮ್ ವೃತ್ತದವರೆಗೆ ಮೆರವಣಿಗೆಯಲ್ಲಿ ತೆರಳಿ, ಮಾನವ ಸರಪಳಿ ನಿರ್ಮಿಸಿ ಕೆಲ ಕಾಲ ಪ್ರತಿಭಟನೆ ನಡೆಸಿದರು.

ಸಂಘಟನೆ ಮುಖಂಡ ಭರತ್‌ರಾಜ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ಹಾಗೂ ರೈತ ವಿರೋಧಿ ನೀತಿಗಳ ವಿರುದ್ಧ, ದುಡಿಯುವ ಜನರ ಹಕ್ಕುಗಳ ಉಳಿವಿಗಾಗಿ ಸಾರ್ವತ್ರಿಕ ಮುಷ್ಕರ ನಡೆಸಲಾಗುತ್ತಿದೆ ಎಂದರು.

ಅಭಿವೃದ್ಧಿಯ ಹೆಸರಿನಲ್ಲಿ ಕಾರ್ಮಿಕರನ್ನು ಕಾರ್ಪೊರೇಟ್ ಕುಳಗಳ ಗುಲಾಮರನ್ನಾಗಿ ಮಾಡಲಾಗುತ್ತಿದೆ. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಕಾಯ್ದೆ ರೂಪಿಸಿ ರೈತರ ಹಿತ ಕಾಯುವ ಬದಲು ಬಲವಂತವಾಗಿ ಭೂಸ್ವಾಧೀನಪಡಿಸಿಕೊಂಡು ಕಾರ್ಪೋರೇಟ್ ಕಂಪನಿಗಳಿಗೆ ನೀಡಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೀತಿ ಖಂಡನೀಯ ಎಂದರು.

ಬಂಧನ-ಬಿಡುಗಡೆ: ಅನಂತ್‌ರಾಮ್ ವೃತ್ತದಲ್ಲಿ ರಸ್ತೆ ಸಂಚಾರ ನಡೆದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು. ಜಿ.ರಾಮಕೃಷ್ಣ, ಆನಂದ, ತಿಮ್ಮೇಗೌಡ, ಶಿವಮಲ್ಲು, ಶಿವಕುಮಾರ್, ದೇವಿ, ಮಹದೇವಮ್ಮ, ಸುಶೀಲಾ, ಮಂಜುಳಾ, ಬಿ.ಮಂಟೇಸ್ವಾಮಿ, ಮರಿಗೌಡ, ಲತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net