ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಪ್ರತಿಭಟನೆ

WhatsApp Image 2023-08-24 at 4.39.45 PM
Published on

ಮಡಿಕೇರಿ: ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಕೊಡಗು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕಟ್ಟಡ ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.


ಸಂಘದ ಅಧ್ಯಕ್ಷ ಎ.ಸಿ.ಸಾಬು ಮಾತನಾಡಿ, ರಾಜ್ಯ ಸರ್ಕಾರದ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬಕ್ಕೆ ಜಾರಿಗೊಳಿಸಬೇಕು. ಮನೆ ನಿರ್ಮಾಣಕ್ಕೆ ೫ ಲಕ್ಷ ರೂ ಸಹಾಯಧನ ನೀಡಬೇಕು. ಕಾರ್ಮಿಕರಿಗೆ ಭವಿಷ್ಯನಿಧಿ ಯೋಜನೆ ಜಾರಿ ಮಾಡಬೇಕು ಎಂದು ಮನವಿ ಮಾಡಿದರು.


ಪ್ರತಿಭಟನಾನಿರತರು ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸರ್ಕಾರಕ್ಕೆ ಜಿಲ್ಲಾಡಳಿತ ಮೂಲಕ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸಂಘದ ಖಜಾಂಚಿ ಸಿ.ಎ.ಹಮೀದ್, ಸಿಐಟಿಯು(ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್) ಖಜಾಂಚಿ ಎನ್.ಡಿ.ಕುಟ್ಟಪ್ಪ, ಕಟ್ಟಡ ಕಾರ್ಮಿಕ ಸಂಘದ ಪದಾಧಿಕಾರಿಗಳಾದ ಕೆ.ಕೆ.ಹರಿದಾಸ್, ಸುರೇಶ್, ಪದ್ಮಿನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net