

ಮಡಿಕೇರಿ: ಕೆಎಸ್‌ಆರ್‌ಟಿಸಿ ನೌಕರರ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ನೌಕರರ ಸಂಘದ ಪದಾಧಿಕಾರಿಗಳು ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ನಿಯಂತ್ರಣಾಧಿಕಾರಿ ಜಯಕರ್ ಶೆಟ್ಟಿರವರಿಗೆ ಬುಧವಾರ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ನೌಕರರ ಸಂಘದ ರಾಜ್ಯಾಧ್ಯಕ್ಷ ಜಗದೀಶ್ ಮಾತನಾಡಿ, ಮಡಿಕೇರಿ ಕೆಎಸ್‌ಆರ್‌ಟಿಸಿ ಡಿಪೋ ಅಧಿಕಾರಿಯ ಕಿರುಕುಳ ಹಿನ್ನೆಲೆ ಡಿಪೋದ ಸಿಬ್ಬಂದಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂತಹ ಅಧಿಕಾರಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಜತೆಗೆ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಘದ ಖಜಾಂಚಿ ಯೋಗೇಶ್, ಪ್ರಧಾನ ಕಾರ್ಯದರ್ಶಿ ರಾಮು, ಕೆಎಸ್‌ಆರ್‌ಟಿಸಿ ನೌಕರರು ಪಾಲ್ಗೊಂಡಿದ್ದರು.