ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಪ್ರತಿಭಟನೆ

vikalachethana protest
Published on

ಮಡಿಕೇರಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ವಿಶೇಷ ಚೇತನರ ಸಂಘದಿಂದ ಮಡಿಕೇರಿಯ ಜಿಲ್ಲಾ ಪಂಚಾಯತ್ ಭವನದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.


ವಿಶೇಷಚೇತನರಿಗೆ ರಾಜ್ಯಾದ್ಯಂತ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು. ವಿಆರ್‌ಡಬ್ಲ್ಯೂಗಳಿಗೆ ಖಾಯಮಾತಿ ಹಾಗೂ ಸೇವಾ ಭದ್ರತೆ ಒದಗಿಸಬೇಕು. ಐದಾರು ತಿಂಗಳಿಗೊಮ್ಮೆ ಗೌರವಧನ ಸಿಗುತ್ತಿದ್ದು, ಸಮಯಕ್ಕೆ ಸರಿಯಾಗಿ ನೀಡಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಮತ್ತು ಔಷಧಿ ದೊರೆಯುವಂತೆ ಮಾಡಬೇಕು. ೫ ಸಾವಿರ ಮಾಸಿಕ ಭತ್ಯೆ, ವಸತಿ ವ್ಯವಸ್ಥೆ, ವಿಶೇಷ ಚೇತನರಿಗೆ ಪ್ರತ್ಯೇಕ ಬಿಪಿಲ್ ಕಾರ್ಡ್ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.


ಈ ಸಂದರ್ಭ ಜಿಲ್ಲಾ ವಿಶೇಷ ಚೇತನರ ಸಂಘದ ಅಧ್ಯಕ್ಷ ಜೆ.ಎ.ಮಹದೇಶ್ವರ, ಕಾರ್ಯದರ್ಶಿ ತಿರುಮಲೇಶ್ವರ, ನಿರ್ದೇಶಕರಾದ ಕೆ.ಎಂ.ಹಸ್ಸನ್, ವೀಣಾ, ಹರೀಶ್, ಜಯ ಕುಮಾರ್, ಮಿಲನ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net