

ಚಿಕ್ಕಮಗಳೂರು: ಪರಿಶಿಷ್ಟ ಜಾತಿಗಳು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ನ್ಯಾಯಮೂರ್ತಿ ಎ.ಜೆ ಸದಾಶಿವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅ. ೧೬ರಂದು ಬುಧವಾರ ಬೆಳಗ್ಗೆ ೧೧ ಗಂಟೆಗೆ ನಗರದ ಆಜಾದ್ ವೃತ್ತದಲ್ಲಿ ವಿವಿಧ ದಲಿತಪರ ಸಂಘಟನೆಗಳಿAದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ಮುಖಂಡ ಕೆ.ಸಿ.ವಸಂತ್ ಕುಮಾರ್ ತಿಳಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳಲ್ಲಿ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಅತಿ ಹಿಂದುಳಿದಿರುವ ಜಾತಿಗಳ ಅಭಿವೃದ್ಧಿಯ ಸದುz್ದೆÃಶದಿಂದ ಆಯಾ ಜಾತಿಗೆ ಸೇರಿದವರಿಗೆ ಮೀಸಲು ಸೌಲಭ್ಯ ತಲುಪಲು ಒಳಮೀಸಲು ನೀಡುವ ಸಂವಿಧಾನಿಕ ಅಧಿಕಾರ ಆಯಾ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ ಎಂದು ಮಾಹಿತಿ ನೀಡಿದರು.
ಒಳಮೀಸಲು ಜಾರಿಗಾಗಿ ೧೯೯೭ ರಿಂದ ವಿವಿಧ ದಲಿತ, ನೌಕರರ, ವಿದ್ಯಾರ್ಥಿ ಸಂಘಟನೆಗಳಿAದ ಹೋರಾಟ ನಡೆಯುತ್ತಲೇ ಇದೆ. ಈ ಒತ್ತಡಕ್ಕೆ ಮಣಿದು ಅಂದಿನ ಧರ್ಮಸಿಂಗ್ ನೇತೃತ್ವದ ಸರ್ಕಾರ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗವನ್ನು ರಚಿಸಿತ್ತು. ಆ ಸಮಿತಿ ವೈಜ್ಞಾನಿಕವಾಗಿ ಅಂಕಿ-ಅAಶಗಳನ್ನು ಕಲೆಹಾಕಿ ತನ್ನ ವರದಿಯನ್ನು ಬಿಜೆಪಿ ಸರ್ಕಾರ ಇದ್ದಾಗ ನೀಡಿದೆ. ಆದರೆ ಅಲ್ಲಿಂದ ಈವರೆಗೆ ಆಡಳಿತ ನಡೆಸಿರುವ ಜೆಡಿಎಸ್, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷ ಕೂಡ ಒಳಮೀಸಲಾತಿ ಜಾರಿ ಮಾಡಲು ಮುಂದಾಗಲಿಲ್ಲ ಎಂದು ಆರೋಪಿಸಿದರು.
ಈ ಹಿಂದೆ ಆಂದ್ರ ಪ್ರದೇಶ ವರ್ಸಸ್ ಚನ್ನಯ್ಯ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಪರಿಶಿಷ್ಟ ಜಾತಿಗಳು ಏಕರೂಪದ್ದಾಗಿವೆ ಎಂದು ತೀರ್ಪು ನೀಡಿದ್ದ ಹಿನ್ನೆಲೆಯಲ್ಲಿ ಒಳಮೀಸಲು ಹೋರಾಟಕ್ಕೆ ಹಿನ್ನೆಡೆ ಆಗಿತ್ತು. ಆದರೆ, ಕಳೆದ ಆಗಸ್ಟ್ ೧ರಂದು ನೀಡಿರುವ ಸುಪ್ರೀಂ ಕೋರ್ಟ್ ತೀರ್ಪಿನಿಂದ ಆಯಾ ರಾಜ್ಯ ಸರ್ಕಾರಗಳು ಒಳಮೀಸಲು ಜಾರಿ ಮಾಡುವ ಅಧಿಕಾರ ಹೊಂದಿವೆ ಎಂದರು.
ಈ ಹಿನ್ನೆಲೆಯಲ್ಲಿ ಸರ್ಕಾರ ಒಳಮೀಸಲು ಜಾರಿಯ ಲಾಭ ನಷ್ಟ ಲೆಕ್ಕ ಹಾಕದೆ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಬೇಕು. ಈ ಹಿನ್ನೆಲೆಯಲ್ಲಿ ಅ. ೧೬ರಂದು ನಗರದ ಆಜಾದ್ ಪಾರ್ಕಿನಲ್ಲಿ ಎಲ್ಲ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಡಿಎಸ್‌ಎಸ್ ಮುಖಂಡ ದಂಟರಮಕ್ಕಿ ಶ್ರೀನಿವಾಸ್ ಮಾತನಾಡಿ, ನ್ಯಾಯಾಲಯ ಸ್ಪಷ್ಟವಾದ ತೀರ್ಪು ನೀಡಿದೆ. ಹೀಗಾಗಿ ಈಗಲಾದರೂ ಸರ್ಕಾರ ಒಳಮೀಸಲು ಜಾರಿಗೆ ಮುಂದಾಗಲಿ ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಜಯರಾಮಯ್ಯ, ಹುಣಸೇಮಕ್ಕಿ ಲಕ್ಷö್ಮಣ, ಹಾಲಪ್ಪ, ಚಂದ್ರಪ್ಪ, ರಘು ಮತ್ತಿತರರಿದ್ದರು.