ಒಬಿಸಿ ಪಟ್ಟಿಗೆ ವೀರಶೈವ-ಲಿಂಗಾಯತ ಸಮುದಾಯ ಸೇರ್ಪಡೆಗೆ ಆಗ್ರಹಿಸಿ ಪ್ರತಿಭಟನೆ

ef8d2039-f049-4f26-87a4-090d833987c7
Published on


ಮಡಿಕೇರಿ: ಕೇಂದ್ರದ ಹಿಂದುಳಿದ ವರ್ಗಗಳ(ಒಬಿಸಿ) ಪಟ್ಟಿಗೆ ವೀರಶೈವ-ಲಿಂಗಾಯತ ಸಮುದಾಯವನ್ನು ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಕೊಡಗು ಜಿಲ್ಲಾ ಘಟಕದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.


ಮಹಸಾಭಾದ ರಾಜ್ಯ ಕಾರ್ಯದರ್ಶಿ ರಾಜೇಶ್ವರಿ ನಾಗರಾಜು ನೇತೃತ್ವದಲ್ಲಿ ನಗರದ ಗಾಂಧಿಮೈದಾನದಿಂದ ಶಾಂತಿಯುತವಾಗಿ ಮೆರವಣಿಗೆ ಸಾಗಿದ ಪ್ರತಿಭಟನಾ ನಿರತರು ವಿವಿಧ ಬೇಡಿಕೆಗೆ ಆಗ್ರಹಿಸಿದರು.


ಪ್ರತಿಭಟನಾ ನಿರತರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಬಿ.ಸಿ.ಸತೀಶ್ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರ ಮನವಿ ಪತ್ರ ಸಲ್ಲಿಸಿದರು.


ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಶಿವಪ್ಪ, ಮಹಾಸಭಾದ ಗೌರವಾಧ್ಯಕ್ಷ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಕಲ್ಲಮಠದ ಮಹಾಂತ ಸ್ವಾಮೀಜಿ, ಉದ್ದಿನಕಟ್ಟೆ ಮಠದ ಅಭಿನವ ಸಿದ್ಧಲಿಂಗ ಶಿವಚಾರ್ತ ಸ್ವಾಮೀಜಿ, ಕೊಡಗು ಘಟಕದ ಪ್ರಧಾನ ಕಾರ್ಯದರ್ಶಿ ಶಾಂಭಶಿವಮೂರ್ತಿ, ಮಡಿಕೇರಿ ತಾಲೂಕು ಅಧ್ಯಕ್ಷ ರುದ್ರಪ್ರಸನ್ನ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಮದುಸೂಧನ್, ವಿರಾಜಪೇಟೆ ತಾಲೂಕು ಉಪಾಧ್ಯಕ್ಷ ಸುರೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net