ಕಾನೂನು ಕ್ರಮಕ್ಕೆ ಒತ್ತಾಯಿಸಿ ಜನಾಗ್ರಹ

1001539543
Published on

ಹೊಳೆನರಸೀಪುರ: ಧರ್ಮಸ್ಥಳದ ಕ್ಷೇತ್ರ ಮತ್ತು ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಸೂಕ್ತವಾದ ಕಾನೂನು ಕ್ರಮಕ್ಕೆ ಒತ್ತಾಯಿಸಿ ಜನಾಗ್ರಹ ಪ್ರತಿಭಟನೆ ನಡೆಯಿತು.

ಪಟ್ಟಣದ ಜಯಚಾಮರಾಜೇಂದ್ರ ವೃತ್ತದ ಮಹಾತ್ಮಾ ಗಾಂಧಿಯವರ ಪ್ರತಿಮೆ ಮುಂದೆ ಶನಿವಾರ ಸಾರ್ವಜನಿಕರು ಮತ್ತು ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘ-ಸಂಸ್ಥೆಗಳ ವತಿಯಿಂದ ಧರ್ಮದ ಉಳಿವಿಗಾಗಿ ಧರ್ಮಯುದ್ಧ ಎಂಬ ಘೊಷಣೆಯೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ನಡೆಯುತ್ತಿರುವ ಅಪಪ್ರಚಾರ ಮತ್ತು ಷಡ್ಯಂತ್ರದ ವಿರುದ್ಧ ಸರ್ಕಾರ ಸೂಕ್ತವಾದ ಕಾನೂನು ಕ್ರಮವನ್ನು ಜರುಗಿಸಬೇಕೆಂದು ಜನಾಗ್ರಹ ಪ್ರತಿಭಟನೆ ನಡೆಯಿತು.

ಪಟ್ಟಣದ ಹೇಮಾವತಿ ವೃತ್ತದಿಂದ ತಾಲೂಕು ಬಿಜೆಪಿ, ಜೆಡಿಎಸ್ ಮತ್ತು ಇನ್ನಿತರ ಸಂಘ-ಸಂಸ್ಥೆಗಳ ಸದಸ್ಯರು ಮತ್ತು ಸಾರ್ವಜನಿಕರು ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ಎಂಬ ಬ್ಯಾನರ್ ಹಿಡಿದು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಮತ್ತು ಕ್ಷೇತ್ರದ ಪವಿತ್ರ್ಯತೆಯ ಬಗ್ಗೆ ಅಪ ಪ್ರಚಾರ ಮಾಡಿದ ಮಹೇಶ್ ತಿಮರೋಡಿ, ಸಮೀರ್, ಗಿರೀಶ್ ಮಟ್ಟಣ್ಣನವರ್, ಸುಜಾತಾ ಭಟ್ ಅವರನ್ನು ತನಿಖೆಗೊಳಪಡಿಸಿ, ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕು ಬಿಜೆಪಿ ಮುಖಂಡರಾದ ಮಳಲಿ ನಾರಾಯಣ್, ಕಾರ್ಯದರ್ಶಿ ಮೋಹನ್, ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಎಸ್.ಪುಟ್ಟಸೋಮಪ್ಪ, ಪುರಸಭೆ ಅಧ್ಯಕ್ಷ ಎಚ್.ಕೆ.ಪ್ರಸನ್ನ,ಗೋಕುಲ್, ಮುರಳೀಧರ ಗುಪ್ತ, ಸಮಾಜ ಸೇವಕ ಅತ್ರಿ ಪ್ರಭಾಕರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net