ವನ್ಯಜೀವಿ ಹಾವಳಿ ತಡೆಗೆ ಆಗ್ರಹಿಸಿ ಪ್ರತಿಭಟನೆ

IMG-20240905-WA0216
ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ವನ್ಯಜೀವಿಗಳ ಸೆರೆಗೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದರು.
Published on

ಗುಂಡ್ಲುಪೇಟೆ : ಪದೇ ಪದೆ ಜಾನುವಾರುಗಳನ್ನು ಕೊಲ್ಲುತ್ತಿರುವ ವನ್ಯಜೀವಿಗಳ ಸೆರೆಗೆ ಒತ್ತಾಯಿಸಿ ತಾಲೂಕು ಪಡುಗೂರು ಗ್ರಾಮದಲ್ಲಿ ರೈತ ಸಂಘಟನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಸಾಮೂಹಿಕ ನಾಯಕತ್ವದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಳೆದ ಕೆಲವು ತಿಂಗಳಲ್ಲಿ ವನ್ಯಜೀವಿಗಳ ದಾಳಿಗೆ ಹಲವಾರು ಜಾನುವಾರು ಬಲಿಯಾಗಿವೆ. ಗುರುವಾರ ಗ್ರಾಮದಲ್ಲಿ ಹಾಡ ಹಗಲೇ ಹುಲಿ ದಾಳಿ ನಡೆಸಿ ಕುರಿಮರಿ ಕೊಂದಿದೆ. ಆದರೂ ಅರಣ್ಯ ಇಲಾಖೆ ಹುಲಿ ಸೆರೆಗೆ ಗಂಭೀರ ಪ್ರಯತ್ನ ಮಾಡುತ್ತಿಲ್ಲ ಎಂಬ ಆಕ್ರೋಶ ವ್ಯಕ್ತಪಡಿಸಿ ಸ್ಥಳಕ್ಕೆ ಅಧಿಕಾರಿಗಳು ಬರುವಂತೆ ಒತ್ತಾಯಿಸಿ ಸಿಬ್ಬಂದಿಗೆ ದಿಗ್ಬಂಧನ ವಿಧಿಸಿದರು. ಈ ವೇಳೆ ಬಫರ್ ವಲಯದ ಪ್ರಭಾರ ವಲಯ ಅರಣ್ಯಾಧಿಕಾರಿ ಸತೀಶ್ ಕುಮಾರ್ ಸ್ಥಳಕ್ಕೆ ಆಗಮಿಸಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿರುವ ವನ್ಯಜೀವಿ ಸೆರೆಗೆ ಬೋನು ಇಡಲಾಗುವುದು ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net