ರಾಜ್ಯಕ್ಕೆ ಅನುದಾನ ಬಿಡುಗಡೆಗೆ ಒತ್ತಾಯ: ಸಿಪಿಐಎಂ, ಕೂಲಿಕಾರರ ಸಂಘದ ಕಾರ್ಯಕರ್ತರ ಪ್ರತಿಭಟನೆ

Protest demanding release of grant mandya
Published on

ಮಂಡ್ಯ: ರಾಜ್ಯಕ್ಕೆ ಬರಗಾಲದ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗುರುವಾರ ನಗರದಲ್ಲಿ ಸಿಪಿಐಎಂ ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆಯಿಂದ ಮೆರವಣಿಗೆ ಹೊರಟ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯಲು ಒಕ್ಕೂಟ ಸರ್ಕಾರ ಅಡ್ಡಿಯಾಗಬಾರದು. ಕೇಂದ್ರ ಪ್ರಾಯೋಜಿತ ಯೋಜನೆಗಳ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಒಕ್ಕೂಟ ಸರ್ಕಾರ ಮಧ್ಯಪ್ರವೇಶ ಮಾಡಬಾರದು/ ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿ ಇ.ಡಿ, ಸಿಬಿಐ, ಆದಾಯ ತೆರಿಗೆ ವಿಭಾಗಗಳನ್ನ ದುರ್ಬಳಕೆ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿದರು.

ರಾಜ್ಯಸರ್ಕಾರಗಳ ವಿಚಾರದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಹಾಗೂ ಸಂವಿಧಾನಾತ್ಮಕ ಸ್ಥಾನದ ದುರುಪಯೋಗ ತಡೆಯಬೇಕು. ರಾಜ್ಯದ ವಿಶ್ವವಿದ್ಯಾಲಯಗಳ ಕುಲಪತಿ ವಿಚಾರದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ತಡೆಯಬೇಕು. ರಾಜ್ಯದ ಶಾಸಕಾಂಗ ಅಂಗೀಕರಿಸಿದ ಶಾಸನಗಳನ್ನು ರಾಜ್ಯಪಾಲರು ತಡೆ ಹಿಡಿಯಬಾರದು. ವಿಳಂಬ ಮಾಡದೆ ಸಹಿ ಮಾಡಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೃಷಿ ಕೂಲಿಕಾರ ಸಂಘದ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು, ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಬಿ.ಹನುಮೇಶ್, ಬಿ.ಎಂ.ಶಿವಮಲ್ಲಯ್ಯ, ಸರೋಜಮ್ಮ, ಎಸ್.ಸುರೇಂದ್ರ, ಅಮಾಸಯ್ಯ, ಆರ್.ರಾಜು, ಅಬ್ದುಲ್ಲಾ, ಕಪನಿಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net