ಶುದ್ಧ ನೀರಿನ ಘಟಕ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

22HDK 01
ಎಚ್.ಡಿ.ಕೋಟೆ ತಾಲೂಕಿನ ಕೆ.ಎಡತೊರೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
Published on

ಎಚ್.ಡಿ.ಕೋಟೆ : ತಾಲೂಕಿನ ಕೆ.ಎಡತೊರೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹಿಸಿ ಗುರುವಾರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ವೇಳೆ ಮಾತನಾಡಿದ ಅಣ್ಣೂರು ಗ್ರಾಮ ಪಂಚಾಯತಿ ಸದಸ್ಯ ಎಡತೊರೆ ಮಹೇಶ್, ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕದ ದುರಸ್ತಿಗೆ ಹಣ ಕೇಳಿದರೆ ನಮ್ಮ ಹತ್ತಿರ ಹಣವಿಲ್ಲ ಎಂದು ಮೈಸೂರು ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಅವರು ಉಡಾಫೆ ಉತ್ತರ ನೀಡಿದ್ದಾರೆ ಎಂದು ದೂರಿದರು.
ಬುಧವಾರ ಕಾರ್ಯನಿಮಿತ್ತ ಸಿಇಒ ಗಾಯತ್ರಿ ಅವರು ಅನಿರೀಕ್ಷಿತವಾಗಿ ಅಣ್ಣೂರು ಗ್ರಾಪಂಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಸದಸ್ಯರು ಪಂಚಾಯಿತಿಗೆ ಆಗಮಿಸಿ, ಕಚೇರಿಯಲ್ಲಿ ಕುಳಿತ್ತಿದ್ದ ಸಿಇಒ ಅವರ ಬಳಿ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಬಗ್ಗೆ ಪ್ರಸ್ತಾಪಿಸಿದಾಗ ಗಾಯತ್ರಿಯವರು ಸಮರ್ಪಕ ಉತ್ತರ ನಿಡದೆ, ನಮ್ಮಲ್ಲಿ ಹಣವಿಲ್ಲ. ಪದೇ ಪದೇ ಈ ವಿಚಾರವನ್ನು ಪ್ರಸ್ತಾಪಿಸಬೇಡಿ ಎಂದು ಏರುಧ್ವನಿಯಲ್ಲಿ ಕೂಗಾಡಿ ಹೊರನಡೆದರು. ಕುಡಿಯಲು ನೀರು ಕೇಳಿದರೆ ಕೊಡಲಾಗದ ಇಂಥ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.
ಗ್ರಾಮ ಪಂಚಾಯತಿ ಸದಸ್ಯ ಎಸ್.ಮಹೇಶ್, ಮುಖಂಡರಾದ ದೇವನಾಥ್, ರಿಜ್ವಾನ್‌ಖಾನ್, ಇಂದ್ರಚಾರಿ, ರಾಜೇಶ್, ವಾಸು, ಮಧು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net