ದಲಿತ ಸಮುದಾಯದ ಹಣ ಗ್ಯಾರಂಟಿ ಯೋಜನೆಗೆ ಬಳಕೆ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

Protest demanding resignation of CM Mandya
Published on

ಮಂಡ್ಯ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿರಿಸಿದ್ದ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ವರ್ಗಾವಣೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಗರದಲ್ಲಿ ಮಂಗಳವಾರ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಕಪ್ಪುಬಾವುಟ ಹಿಡಿದು ಬೆಂಗಳೂರು-ಮೈಸೂರು ಮೆರವಣಿಗೆ ಹೊರಟ ಸಮಿತಿಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಪರಿಶಿಷ್ಟರ ಮೀಸಲಾಗಿದ ಅನುದಾನದಲ್ಲಿ 25,282 ಕೋಟಿ ರೂಗಳನ್ನು ಗ್ಯಾರಂಟಿ ಯೋಜನೆಗೆ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಅದೇ ರೀತಿ ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ ಭ್ರಷ್ಟಾಚಾರ ನಡೆಸಿ ಹಣ ಗುಳುಂ ಮಾಡಲಾಗಿದೆ. ಆರ್ಥಿಕ ಅಶಿಸ್ತಿನ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ, ಜಿಲ್ಲಾಧ್ಯಕ್ಷ ಬಿ.ಆನಂದ್, ಮರಂಕಯ್ಯ, ಈಚಗೆರೆ ನಾಗರಾಜ್, ವೈ.ಸುರೇಶ್ ಕುಮಾರ್, ಹೊನ್ನಯ್ಯ, ಎನ್.ಸಿ.ರಾಜು, ಸುರೇಶ್ ಮರಳಗಾಲ, ಮಹದೇವ್ ಕೊತ್ತತ್ತಿ, ಭಾಗ್ಯಮ್ಮ, ಗೀತಾ, ಸುಕನ್ಯಾ, ಸರಳಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net