

ಚಿಕ್ಕಮಗಳೂರು: ಗ್ರಾಪಂ ಪಂಚನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವುದು ಹಾಗೂ ಆರ್‌ಡಿಪಿಆರ್ ಕುಟುಂಬದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಂಚಾಯಿತಿ ಅಭಿವೃಧ್ದಿ ಅಧಿಕಾರಿ ಕ್ಷೇಮಾಭಿವೃಧ್ದಿ ಜಿಲ್ಲಾ ಸಂಘದಿAದ ಸೋಮವಾರ ಜಿಪಂ ಆವರಣದಲ್ಲಿ ನೌಕರರು ಬೃಹತ್ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.
ಪ್ರತಿಭಟನೆಯನ್ನುz್ದೆÃಶಿಸಿ ಮಾತನಾಡಿದ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಯೋಗೀಶ್, ರಾಜ್ಯದಲ್ಲಿ ಜನರಿಗೆ ಸ್ಥಳೀಯ ಸಂಸ್ಥೆಯಾದ ಗ್ರಾಮ ಪಂಚಾಯಿತಿಗಳು ಶೇ. ೭೦ರಷ್ಟು ಸೇವೆಗಳನ್ನು ಪ್ರಾಮಾಣಿಕವಾಗಿ ಒದಗಿಸುತ್ತಿವೆ. ಈ ವ್ಯವಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಗ್ರಾಪಂ ಸದಸ್ಯರು, ಪಿಡಿಓ, ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಗೂ ಸಿಬ್ಬಂದಿ ವಿವಿಧ ಸಮಸ್ಯೆ ಎದುರಿಸುತ್ತಿದ್ದಾರೆ. ಈ ನಡುವೆ ಎಲ್ಲ ಸಮಸ್ಯೆಗಳಿಗೆ ಪಿಡಿಓ ಹಾಗೂ ಸಿಬ್ಬಂದಿಯನ್ನು ನೇರ ಹೊಣೆಗಾರರನ್ನಾಗಿಸುವ ಸರ್ಕಾರ ಮತ್ತು ಇಲಾಖೆ ಧೋರಣೆ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನತೀಕರಿಸಬೇಕು. ಜೇಷ್ಟತಾ ಪಟ್ಟಿಯನ್ನು ಕೂಡಲೇ ಅಂತಿಮಗೊಳಿಸಿ, ಬಡ್ತಿ ನೀಡಲು ಕ್ರಮ ಕೈಗೊಳ್ಳಬೇಕು. ಇತರೆ ಇಲಾಖೆಯಲ್ಲಿರುವ ಸಮಾನಾಂತರ ಹುದ್ದೆಗಳಿಗೆ ನಿಯೋಜನೆ ಮೇಲೆ ಹೋಗಲು ಒಟ್ಟು ಮಂಜೂರಾದ ಹುದ್ದೆಗಳಲ್ಲಿ ಶೇ. ೨೫ ಹುದ್ದೆಗಳಿಗೆ ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು.
ಏಳು ವರ್ಷ ಪೂರೈಸಿ ಕರ್ತವ್ಯ ನಿರ್ವಹಿಸುತ್ತಿರುವ ಪಿಡಿಓಗಳನ್ನು ಬೇರೆ ತಾಲೂಕಿಗೆ ವರ್ಗಾವಣೆ ನಿಯಮ ಕೈಬಿಡಬೇಕು. ಜಿಲ್ಲೆಯಲ್ಲಿ ಸ್ವಇಚ್ಚೆ ಇಲ್ಲದೇ ಸಾರ್ವಜನಿಕ ಹಿತಾಸಕ್ತಿ ಹಿತದೃಷ್ಟಿ ತೋರದೆ ಬದಲಾವಣೆ ಮಾಡಬಾರದು ಮತ್ತು ವರ್ಗಾವಣೆ ನಿಯಮಗಳಲ್ಲಿ ಯಾವುದೇ ಬದಲಾವಣೆಗೆ ಮುನ್ನ ಸಂಘದ ಸಲಹೆಯನ್ನು ಪಡೆಯಬೇಕು ಎಂದು ಒತ್ತಾಯಿಸಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಜಗನ್ನಾಥ್ ಮಾತನಾಡಿ, ಗ್ರಾಪಂಗಳು ಮೇಲ್ದರ್ಜೇಗೇರಿಸಿದ ವೇಳೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಅಲ್ಲಿನ ಸರ್ಕಾರಿ ನೌಕರರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ವಿಲೀನಗೊಳಿಸುವುದು ಹಾಗೂ ವಸತಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರ ಹುದ್ದೆ ಸೃಜನೆ ಮಾಡಿ ಪಿಡಿಓಗಳಿಗೆ ಪದೋನ್ನತಿ ನೀಡುವ ಮೂಲಕ ಭರ್ತಿಗೊಳಿಸಬೇಕು ಎಂದು ತಿಳಿಸಿದರು.
ಗ್ರಾಪಂನ ಪಂಚ ನೌಕರರುಗಳಿಗೆ ವೇತನ ಶ್ರೇಣಿ ಮತ್ತು ಸೇವಾಹಿರಿತನದ ವೇತನವನ್ನು ಜಾರಿಗೊಳಿಸಿ ಕಾರ್ಮಿಕ ಇಲಾಖೆಯ ವೇತನವನ್ನು ಹೊರತುಪಡಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಿಂದ ವೇತನ ನಿಗಧಿಪಡಿಸಿ ನೇರ ನೌಕರರ ಖಾತೆಗೆ ಪಾವತಿಸಬೇಕು ಎಂದರು
ಗ್ರಾಪA ಸಿಬ್ಬಂದಿಗೆ ಆರೋಗ್ಯವಿಮೆ ೫೦ ಸಾವಿರವಿದೆ. ಇದರಿಂದ ನೌಕರರಿಗೆ ಪ್ರಯೋಜನವಾಗುತ್ತಿಲ್ಲ. ಹೀಗಾಗಿ ೫ ಲಕ್ಷ ಆರೋಗ್ಯವಿಮೆ ಜಾರಿಮಾಡಬೇಕು. ಕರವಸೂಲಿಗಾರರು ಮತ್ತು ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ವೃಂದದಿAದ ಸೇವೆ ಒಳಗಿನ ನೇಮಕಾತಿಗೆ ಎಸ್‌ಡಿಎಎ ವೃಂದಕ್ಕೆ ಪದೋನ್ನತಿ ಹೊಂದಲು ಶೇ.೭೫ರಷ್ಟು ಪ್ರಮಾಣ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಗ್ರೇಡ್-೧ ಕಾರ್ಯದರ್ಶಿಗಳ ವೃಂದದ ಜೇಷ್ಟತಾ ಪಟ್ಟಿಯನ್ನು ತುರ್ತಾಗಿ ಪ್ರಕಟಣೆಗೊಳಿಸಿ ಪಿಡಿಓ ವೃಂದಕ್ಕೆ ಮುಂಬಡ್ತಿ ನೀಡುವ ಬಗ್ಗೆ ಆಯುಕ್ತರಿಗೆ ಸರ್ಕಾರದ ನಿರ್ದೇಶಕವಿದ್ದರೂ ನಿರಾಸಕ್ತಿ ವಹಿಸುತ್ತಿರುವುದರಿಂದ ಸಾವಿರಕ್ಕೂ ಅಧಿಕ ವಿವಿಧ ವೃಂದದ ನೌಕರರು ಮುಂಬಡ್ತಿಯಿAದ ವಂಚಿತರಾಗಿದ್ದಾರೆ. ಕಾಲಮಿತಿಯೊಳಗೆ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಗೆ ಬೆಂಬಲಿಸಿ ಸೂಚಿಸಿದ ಮಾತನಾಡಿದ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ, ಪಂಚನೌಕರರ ಬೇಡಿಕೆಗಳನ್ನು ಈಡೇರಿಸದೇ ರಾಜ್ಯಸರ್ಕಾರ ಸತಾಯಿಸುತ್ತಿದೆ. ಪಂಚಾಯಿತಿ ವ್ಯಾಪ್ತಿಯ ನೌಕರರನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದು, ಶೀಘ್ರದಲ್ಲೇ ಸರ್ಕಾರ ಪಂಚ ನೌಕರರ ಬೇಡಿಕೆಗೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕ್ಷೇಮಾಭೀವೃದ್ಧಿ ಸಂಘದ ಧ ಉಪಾಧ್ಯಕ್ಷೆ ಎಂ.ಶಾAತಿ, ಪ್ರಧಾನ ಕಾರ್ಯದರ್ಶಿ ಜಿ.ಪಿ.ರಾಜವಿಜಯನ್, ಖಜಾಂಚಿ ಎಚ್.ಎನ್.ಶೇಖರ್, ತಾಲೂಕು ಉಪಾಧ್ಯಕ್ಷ ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ಲಕ್ಷö್ಮಣ್, ಖಜಾಂಚಿ ಸುಮಾ, ಅಜ್ಜಂಪುರ ಅಧ್ಯಕ್ಷ ಪ್ರಸನ್ನ ಕುಮಾರ್, ತರೀಕೆರೆ ಅಧ್ಯಕ್ಷ ಶಿವಮೂರ್ತಿ, ಮೂಡಿಗೆರೆ ಅಧ್ಯಕ್ಷ ಕೃಷ್ಣಪ್ಪ, ಎನ್.ಆರ್.ಪುರ ಅಧ್ಯಕ್ಷ ಮನೀಶ್, ಕಡೂರು ಅಧ್ಯಕ್ಷ ಆದಿನಾಥ ಬೀಳಗಿ ಮತ್ತಿತರರಿದ್ದರು.