ಬಸ್ ಪಾಸ್ ಗಾಗಿ ಎಬಿವಿಪಿ ಪ್ರತಿಭಟನೆ

IMG-20240627-WA0007-1.jpg
Published on

ಹುಬ್ಬಳ್ಳಿ: ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ ಪಾಸ್ ವಿತರಿಸಬೇಕು, ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಬುಧವಾರ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಸ್ ಪಾಸ್ ಅವ್ಯವಸ್ಥೆಯನ್ನು ಖಂಡಿಸಿದರು. ಕೂಡಲೇ ಸರಿಪಡಿಸಲು ಸರ್ಕಾರಕ್ಕೆ ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net