ಇನ್ನರ್ ವೀಲ್ ಕ್ಲಬ್ ನಿಂದ ಪ್ರತಿಭಟನೆ ಆ. 24ಕ್ಕೆ

21 ckm 1 kavita
ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಇನ್ನರ್ ವೀಲ್ ಕ್ಲಬ್ ಮಾಜಿ ಅಧ್ಯಕ್ಷೆ ಕವಿತಾ ಮಾತನಾಡಿದರು.
Published on

ಚಿಕ್ಕಮಗಳೂರು: ಕಲ್ಕತ್ತದಲ್ಲಿ ವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು ಖಂಡಿಸಿ ಆ. 24ರಂದು 11 ಗಂಟೆಗೆ ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಇನ್ನರ್ ವೀಲ್ ಕ್ಲಬ್ ನಿಂದ ಮೌನ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಇನ್ನರ್ ವೀಲ್ ಕ್ಲಬ್ ಮಾಜಿ ಅಧ್ಯಕ್ಷೆ ಕವಿತಾ ತಿಳಿಸಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನರ್ ವೀಲ್ ಕ್ಲಬ್ ನ ಮೌನ ಪ್ರತಿಭಟನಾ ಮೆರವಣಿಗೆಗೆ 15ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ಹೇಳಿದರು.
ಪ್ರತಿಭಟನಾ ಮೆರವಣಿಗೆ ವೇಳೆ ನಾವು ಯಾವುದೇ ಘೋಷಣೆಗಳನ್ನು ಕೂಗುವುದಿಲ್ಲ. ಬದಲಿಗೆ ಬಿತ್ತಿ ಪತ್ರಗಳ ಮೂಲಕ ಅಭಿವ್ಯಕ್ತಿಗೊಳಿಸಲಿದ್ದೇವೆ. ಅತ್ಯ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂಬುದು ನಮ್ಮ ಒತ್ತಾಯವಾಗಿದೆ ಎಂದು ತಿಳಿಸಿದರು.
ಪ್ರತಿಭಟನಾ ಮೆರವಣಿಗೆ ವೇಳೆ ಮಾರ್ಗದುದ್ದಕ್ಕೂ ಘಟನೆಯನ್ನು ಖಂಡಿಸಿ ಸಹಿ ಸಂಗ್ರಹ ಅಭಿಯಾನ ನಡೆಸಲಾಗುವುದು. ಬಳಿಕ ಸಹಿ ಸಂಗ್ರಹ ಪತ್ರದ ಜೊತೆಗೆ ನಮ್ಮ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ತಲುಪಿಸುತ್ತೇವೆ ಎಂದು ತಿಳಿಸಿದರು.
ಕಲ್ಕತ್ತಾದಲ್ಲಿ ನಡೆದ ವೈದ್ಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಇಡೀ ಮನುಕುಲಕ್ಕೆ ನಾಚಿಕೆಯಾಗುವಂತಿದೆ. ಆಸ್ಪತ್ರೆಯಲ್ಲಿಯೇ ವೈದ್ಯರಿಗೆ ರಕ್ಷಣೆ ಇಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ. ಮುಂದೆ ಈ ರೀತಿಯ ಘಟನೆಗಳು ಮರುಕಳಿಸಬಾರದು ಹಾಗೂ ವೈದ್ಯೆ ಹತ್ಯೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮುಂದೆ ಈ ರೀತಿಯ ಕೃತ್ಯಕ್ಕೆ ಕೈ ಹಾಕುವವರಿಗೆ ಎಚ್ಚರಿಕೆ ನೀಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಕ್ಲಬ್ ಅಧ್ಯಕ್ಷೆ ಶಾಲಿನಿ ನಾಗೇಶ್, ಕಾರ್ಯದರ್ಶಿ ಸಂಗೀತ, ಉಪಾಧ್ಯಕ್ಷೆ ನಯನ ಸಂತೋಷ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net