ಜಾಗರಣ ವೇದಿಕೆ, ಜನಮನ ವೇದಿಕೆಯಿಂದ ಪ್ರತಿಭಟನೆ

18
Published on

ಮೈಸೂರು: ಬಾಂಗ್ಲಾ ದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯ ವಿರೋಧಿಸಿ ಹಾಗೂ ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಹಾಗೂ ಜನಮನ ವೇದಿಕೆಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ಚಾಮುಂಡಿಪುರಂ ವೃತ್ತದಲ್ಲಿ ಭಾರತಮಾತೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೇಣದಬತ್ತಿ ಬೆಳಗಿಸಿ, ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿ ಬಾಂಗ್ಲಾ ಹಿಂದುಗಳ ಜತೆಗೆ ನಾವಿದ್ದೇವೆ ಎನ್ನುವ ಸಂದೇಶ ಸಾರಿದರು.
ನಗರಪಾಲಿಕೆ ಮಾಜಿ ಸದಸ್ಯ ಮಾ.ವಿ. ರಾಮಪ್ರಸಾದ್ ಮಾತನಾಡಿ, ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಹಿಂದುಗಳನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆದಿವೆ. ಹಿಂದುಗಳ ಮನೆ, ಕಚೇರಿಗಳಿಗೆ ಬೆಂಕಿ ಹಚ್ಚಲಾಗಿದೆ. ಈಗಾಗಲೇ ಹಲವರು ಮೃತಪಟ್ಟಿದ್ದಾರೆ. ಅಲ್ಲಿ ನಡೆಯುತ್ತಿರುವ ರಾಜಕೀಯ ಗಲಭೆಗಳಿಂದಾಗಿ ಹಿಂದುಗಳು ಬಲಿಯಾಗುತ್ತಿದ್ದಾರೆ. ಅವರ ರಕ್ಷಣೆಗೆ ಕೇಂದ್ರ ಸರ್ಕಾರ ಹಕ್ಕೊತ್ತಾಯ ಮಂಡಿಸಲಿ ಎಂದು ಒತ್ತಾಯಿಸಿದರು.
ಬಾಂಗ್ಲಾದೇಶ, ಪಾಕಿಸ್ತಾನಗಳಲ್ಲಿ ಹಿಂದುಗಳ ಸಂಖ್ಯೆ ದಿನೇ ದಿನೆ ಕಡಿಮೆಯಾಗುತ್ತಿದೆ. ಹಿಂದುಗಳ ಮೇಲೆ ದೌರ್ಜನ್ಯ, ಅತ್ಯಾಚಾರ, ಕ್ರೌರ್ಯ ಪ್ರದರ್ಶನ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಪೂರ್ವಕ್ಕೆ ಹೋಲಿಸಿದರೆ ಹಿಂದುಗಳ ಜನಸಂಖ್ಯೆ ತೀವ್ರಗತಿಯಲ್ಲಿ ಕುಸಿದಿದೆ. ಮಾನವ ಹತ್ಯೆ ವಿರುದ್ಧ ವಿಶ್ವಸಂಸ್ಥೆ ಧ್ವನಿ ಎತ್ತಬೇಕು. ಬಾಂಗ್ಲಾದೇಶದಲ್ಲಿ ಹಿಂದುಗಳ ಮನೆಗಳಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಕೆ.ಆರ್.ಕ್ಷೇತ್ರದ ಅಧ್ಯಕ್ಷ ಗೋಪಾಲ್ ರಾಜ್ ಅರಸ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮುಖಂಡ ಉಮಾಶಂಕರ್, ಮಹೇಶ್, ಲಕ್ಷ್ಮೀನಾರಾಯಣ್, ಮಂಜುನಾಥ್, ಅಪೂರ್ವ ಸುರೇಶ್, ಸೋಮೇಶ್, ರಂಗಸ್ವಾಮಿ, ಶಿವಲಿಂಗಚಾರ್, ರವಿ, ನಾಗೇಂದ್ರ, ಹರ್ಷ, ನಾಗರಾಜ್, ಚಂದ್ರು, ಅರವಿಂದ, ಕಾವ್ಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net