ಕೆಲಸ ಸ್ಥಗಿತಗೊಳಿಸಿ ಪೌರ ಕಾರ್ಮಿಕರ ಪ್ರತಿಭಟನೆ

Published on

ಹುಬ್ಬಳ್ಳಿ: ಪೌರ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಇಲ್ಲಿಯ ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಎದುರು ಜುಲೈ 18ರಿಂದ ಅನಿರ್ದಿಷ್ಟ ಅಹೋರಾತ್ರಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ, ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಪೌರ ಕಾರ್ಮಿಕರಿಗೆ ನೇರ ವೇತನ ಪಾವತಿಸಬೇಕು, ರಾಜ್ಯ ಸರ್ಕಾರ ನೌಕರರನ್ನು ನೇರ ನೇಮಕಾತಿ ಮಾಡಿಕೊಳ್ಳಬೇಕು. ಶುಚಿ ರುಚಿಯಾದ ಆಹಾರ ನೀಡಬೇಕು ಎಂದು ಆಗ್ರಹಿಸಿದರು.

ಪೌರ ಕಾರ್ಮಿಕರ ಬೇಡಿಕೆಗಳಿಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಕಾರ್ಮಿಕ ಇಲಾಖೆ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ. ಕಾರ್ಮಿಕರ ಶೋಷಣೆ ನಿಲ್ಲುತ್ತಿಲ್ಲ ಎಂದು ದೂರಿದರು.

ಸಂಘದ ಗಾಳೆಪ್ಪ ದ್ವಾಸಲಕೇರಿ, ಗಂಗಮ್ಮ ಸಿದ್ರಾಮಪುರ, ಕನಕಪ್ಪ ಕೊಟಬಾಗಿ, ಭಾಗ್ಯಲಕ್ಷ್ಮೀ ಮಾದರ, ಸೋಮು ಮೊರಬದ ಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net