ರೈತರ ಒತ್ತುವರಿ ತೆರವು ಮಾಡಿದರೆ ಪ್ರತಿಭಟನೆ

dinesh Hosur KPP) (2)
ದಿನೇಶ್ ಹೊಸೂರು
Published on

ಕೊಪ್ಪ: ರೈತರು ಜೀವನಕ್ಕಾಗಿ ಎರಡು, ಮೂರು ಎಕರೆ ಭೂಮಿಯಲ್ಲಿ ಒತ್ತುವರಿ ಮಾಡಿಕೊಂಡು ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಸರ್ಕಾರ ಬಡ ರೈತರ ಒತ್ತುವರಿ ತೆರವಿಗೆ ಮುಂದಾಗಿದೆ. ಒಂದು ವೇಳೆ ಸರ್ಕಾರ ರೈತರ ಒತ್ತುವರಿ ತೆರವು ಮಾಡಿದರೆ ರೈತರ ಜತೆಗೂಡಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ದಿನೇಶ್ ಹೊಸೂರು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ರೈತ ವಿರೋಧಿ, ಮಲೆನಾಡಿಗರ ವಿರೋಧಿ ಧೋರಣೆ ಅನುಸರಿಸುತ್ತಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಲೆನಾಡು ಭಾಗದಲ್ಲಿ ಒತ್ತುವರಿಯನ್ನು ತೆರವು ಮಾಡುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಒತ್ತುವರಿ ಬಿಡಿಸಲು ಮುಂದಾದರೇ ಬಿಜೆಪಿಯಿಂದ ಹೋರಾಟ ರೂಪಿಸಲಾಗುವುದು. ಕೂಡಲೇ ಅರಣ್ಯ ಸಚಿವರು ತಮ್ಮ ಹೇಳಿಕೆ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಅನಾಹುತಗಳು ಹೆಚ್ಚಾಗಿ ಸಾರ್ವಜನಿಕರು ಸಂಕಷ್ಟದಲ್ಲಿದ್ದಾರೆ. ಇವರ ನೆರವಿಗೆ ಬರಬೇಕಾದ ಸರ್ಕಾರ ರೈತರ ಒತ್ತುವರಿ ತೆರವಿಗೆ ಮುಂದಾಗಿದೆ. ಸರ್ಕಾರ ಕೂಡಲೇ ಕ್ಷೇತ್ರವನ್ನು ಅತಿವೃಷ್ಟಿ ಪೀಡಿತ ಕ್ಷೇತ್ರ ಎಂದು ಪರಿಗಣಿಸಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net