ಅನಗತ್ಯ ವೆಚ್ಚ ತಗ್ಗದಿದ್ದರೆ ಹೋರಾಟ: ಕಾರ್ಮಿಕರ ಸಂಘದ ಅಧ್ಯಕ್ಷ ಜಿ.ಸಿದ್ದರಾಜು

Published on

ಮೈಸೂರು: ಕಾರ್ಮಿಕ ಮಂಡಳಿಯು ವಿವಿಧ ಟೆಂಡರ್‌ಗಳ ಹೆಸರಲ್ಲಿ ಅನಗತ್ಯ ವೆಚ್ಚಗಳನ್ನು ಮಾಡುತ್ತಿದ್ದು, ಸೂಕ್ತ ರೀತಿಯಲ್ಲಿ ಕಾರ್ಮಿಕರ ಕಲ್ಯಾಣಕ್ಕೆ ಮುಂದಾಗದೆ ಇದ್ದರೆ ತೀವ್ರ ಹೋರಾಟ ಮಾಡಲಾಗುವುದು ಎಂದು ರಾಜ್ಯ ಭಾರತಮಾತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಜಿ.ಸಿದ್ದರಾಜು ಎಚ್ಚರಿಸಿದರು.

ಮಂಡಳಿಯವರು ವೈದ್ಯಕೀಯ ತಪಾಸಣೆ, ತರಬೇತಿ ಶಿಬಿರ, ಸಂಚಾರಿ ಚೆಕ್‌ಅಪ್, ಹೆಲ್ತ್ ಕಿಟ್ ಹೆಸರಿನಲ್ಲಿ ಕಾರ್ಮಿಕರನ್ನು ವಂಚಿಸ ಲಾಗುತ್ತಿದೆ. ಈ ರೀತಿ ಅನಗತ್ಯವಾಗಿ ನೂರಾರು ಕೋಟಿ ರೂ. ದುಂದುವೆಚ್ಚ ಮಾಡಲಾಗುತ್ತಿದೆ. ಇದರಿಂದ ಕಾರ್ಮಿಕರ ಕುಟುಂಬಕ್ಕೆ ನೀಡಬೇಕಿದ್ದ ವಿದ್ಯಾರ್ಥಿ ವೇತನ, ಪಿಂಚಣಿಗಳು ಸಹ ನಿಂತುಹೋಗಿವೆ. ಕಟ್ಟಡ ಕಾರ್ಮಿಕರ ಬೆವರಿನ ಹಣವನ್ನು ಅನಗತ್ಯವಾಗಿ ವ್ಯಯಿಸಬಾರದು. ಕೂಡಲೇ ಈ ಬಗ್ಗೆ ಸರ್ಕಾರ ಕ್ರಮ ವಹಿಸಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಅಕ್ರಂ, ಪ್ರಧಾನ ಕಾರ್ಯದರ್ಶಿ ನೂರ್ ಅಹಮದ್, ರಾಜ್ಯ ಕಾರ್ಯದರ್ಶಿ ಪ್ರಕಾಶ, ಸಂಘಟನಾ ಕಾರ್ಯದರ್ಶಿ ನಂಜುಂಡಿ, ಉಪಾಧ್ಯಕ್ಷ ಶ್ರೀನಿವಾಸ್, ಸಂಚಾಲಕ ಸತೀಶ್, ತಾಲೂಕು ಕಾರ್ಯದರ್ಶಿ ನಾಗರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net