

ಚನ್ನರಾಯಪಟ್ಟಣ: ತಾಲೂಕಿನ ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಸೋಮವಾರ ಹೇಮಾವತಿ ಕಚೇರಿಗೆ ಭೇಟಿ ನೀಡಿ ಕೆರೆ-ಕಟ್ಟೆಗಳಿಗೆ ನೀರು ಹರಿಸಬೇಕು ಎಂದು ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಎ.ಆರ್. ರಘು ಅವರಿಗೆ ಆಗ್ರಹಿಸಿದರು.
ತಾಲೂಕಿನ ಕೆರೆ-ಕಟ್ಟೆಗಳಿಗೆ ನೀರು ಹರಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರ್.ರಘು ಮಾತನಾಡಿ, ಬೆಂಗಳೂರಿನಲ್ಲಿ ನೀರಾವರಿ ಇಲಾಖೆಯ ವ್ಯವಸ್ಥಾಪಕರಿಗೆ ನೀರಿನ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಅಲ್ಲಿನ ನಿರ್ಧಾರದಂತೆ ಕ್ರಮವಹಿಸಲಾಗುವುದು ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಹಡೇನಹಳ್ಳಿ ಲೋಕೇಶ್, ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಆನಂದ್ ಕಾಳೇನಹಳ್ಳಿ, ಕರ್ನಾಟಕ ಸಮರ ಸೇನೆ ಅಧ್ಯಕ್ಷ ಭರತ್ ಗೌಡ, ಭೂಮಿ ಕ್ಷೇಮಾಭಿವೃದ್ಧಿ ಸಂಘದ ರಾಜಕುಮಾರ್, ರೈತ ಸಂಘದ ಮಂಜುನಾಥ್, ವಿವಿಧ ಸಂಘಟನೆಯ ಮುಖಂಡರಾದ ಜಬಿವುಲ್ಲಾ ಬೇಗ್, ಕುಂಬಾರಹಳ್ಳಿ ರಮೇಶ್, ಪರಮಕೃಷ್ಣೇಗೌಡ, ಇದ್ದರು.