29ರಂದು ಬೆಂಗಳೂರಿನಲ್ಲಿ ಪ್ರತಿಭಟನೆ : ದೈಹಿಕ ಶಿಕ್ಷಕರ ಸಂಘದ ಮಂಜುನಾಥ ಎಚ್ಚರಿಕೆ

shaale
ದೈಹಿಕ ಶಿಕ್ಷಕರ ಸಂಘದಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ.
Published on

ಬೈಂದೂರು: ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ಎಲ್ಲ ಶಾಲೆಗಳಲ್ಲಿ ನೇಮಕಾತಿಗಾಗಿ ಒತ್ತಾಯಿಸಿ ರಾಜ್ಯಾದ್ಯಂತ ದೈಹಿಕ ಶಿಕ್ಷಣ ಶಿಕ್ಷಕರು ಸಾತ್ವಿಕ ಪ್ರತಿಭಟನೆ ನಡೆಸುತ್ತಿದ್ದಾರೆ. ಕ್ರೀಡಾ ಸ್ಪರ್ಧೆಗಳಲ್ಲಿ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಮಕ್ಕಳ ಕ್ರೀಡಾ ಜೀವನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಲಾಗಿದೆ ಎಂದು ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಬೈಂದೂರು ತಾಲೂಕು ಸಂಘದ ಸದಸ್ಯ ಮಂಜುನಾಥ ಶೆಟ್ಟಿ ಹೇಳಿದರು.

ಹೋರಾಟದ ಮುಂದಿನ ಹಂತವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಗಸ್ಟ್ 29ರಂದು ನಡೆಯುವ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಸಂದರ್ಭ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸಂಘದ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಕಿರಿಮಂಜೇಶ್ವರ ಗ್ರಾಪಂ ಅಧ್ಯಕ್ಷ ಶೇಖರ ಖಾರ್ವಿ, ನಾವುಂದ ಗ್ರಾಪಂ ಅಧ್ಯಕ್ಷ ನರಸಿಂಹ ದೇವಾಡಿಗ ಕಪ್ಪುಪಟ್ಟಿ ಧರಿಸಿ ಶಿಕ್ಷಕರ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net