ಬೇಡಿಕೆ ಈಡೇರಿಕೆಗಾಗಿ 3 ದಿನ ದಾಂಡೇಲಿಯಲ್ಲಿ ಪ್ರತಿಭಟನೆ

Protest
Published on

ದಾಂಡೇಲಿ: ದಾಂಡೇಲಿಯಲ್ಲಿ ಹೈಟೆಕ್ ಬಸ್ ನಿಲ್ದಾಣ, ಸರ್ಕಾರಿ ಆಸ್ಪತ್ರೆಯನ್ನು ಉನ್ನತೀಕರಣಗೊಳಿಸಲು ಹಾಗೂ ದಾಂಡೇಲಿಗೆ ಪ್ರಯಾಣಿಕರ ರೈಲು ಆರಂಭಿಸುವ ಬೇಡಿಕೆ ಈಡೇರಿಕೆಗಾಗಿ ರಾಜ್ಯ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ದಾಂಡೇಲಿ ಘಟಕದ ಪದಾಧಿಕಾರಿಗಳು ಹೋರಾಟಕ್ಕೆ ಕರೆ ನೀಡಿದ್ದಾರೆ.

ಜ. 17ರಂದು ಬಸ್ ನಿಲ್ದಾಣದ ಎದುರು, 18ರಂದು ಸರ್ಕಾರಿ ಆಸ್ಪತ್ರೆ ಎದುರು ಹಾಗೂ 19ರಂದು ರೈಲು ನಿಲ್ದಾಣದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಆಯೋಗದ ದಾಂಡೇಲಿ ಘಟಕದ ಅಧ್ಯಕ್ಷ ಫಿರೋಜ ಪೀರಜಾದೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net