

ಬೆಳ್ತಂಗಡಿ: ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎಂಬ ಘೋಷ ವಾಕ್ಯಗಳೊಂದಿಗೆ ಬ್ಲಾಕ್ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್, ಕಾಂಗ್ರೆಸ್ ಗ್ರಾಮೀಣ ಸೇವಾದಳದ ಅಧ್ಯಕ್ಷ ಪ್ರದೀಪ್ ಕೆ.ಸಿ., ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಝರ್ ನಾವೂರು, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಝೀನತ್ ಉಜಿರೆ, ಮೇಳ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷರಾದ ಶೋಭಾ ನಾರಾಯಣ ಗೌಡ, ತಾಲೂಕು ಕೆಡಿಪಿ ಸದಸ್ಯರಾದ ಸುನೀಲ್ ಜೈನ್, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಇಸ್ಮಾಯಿಲ್ ಪೇರಿಂಜೆ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ವೀರೇಂದ್ರ ಕುಮಾರ್ ಜೈನ್, ಆರಾಧನಾ ಸಮಿತಿ ಸದಸ್ಯರಾದ ಬಾಲಕೃಷ್ಣ ಭಟ್, ಪ್ರಮುಖರಾದ ಹಣ್ಣು ಪರಮಾರು ವಿಜಯ ಗೌಡ ಬೆಳಾಲು, ಶರೀಫ್ ಶಬರಬೈಲ್, ಮಹಮ್ಮದ್ ಹನೀಫ್ ಉಜಿರೆ, ಉಮೈರಾ ಬಾನು, ಕುಶಲಪ್ಪ ಗೌಡ ಶಿರ್ಲಾಲು, ಡಯಾನಾ ಪುದುವೆಟ್ಟು, ಸಂತೋಷ್ ಕೆ.ಸಿ. ಪುದುವೆಟ್ಟು, ಕುಶಲಪ್ಪ ಗೌಡ ಕಳೆಂಜ ಮೊದಲಾದವರಿದ್ದರು.