ನಿವೃತ್ತ ನೌಕರರಿಂದ ಡಿಸಿ ಕಚೇರಿಯ ಎದುರು ಪ್ರತಿಭಟನೆ

Penshorns strike.
Published on

ಕಾರವಾರ: ಏಳನೇ ವೇತನ ಆಯೋಗ ಪ್ರಯೋಜನಗಳನ್ನು 1-7-2022 ರಿಂದ 31-7-2024 ರವರೆಗಿನ ನೌಕರರಿಗೆ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ವೇದಿಕೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಯ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಸರ್ಕಾರದ ವಿರುದ್ಧ ಘೋಷಣೆ ಕೂಗಿ ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರವನ್ನು ಸಲ್ಲಿಸಿದರು. ಇದೇ ಆಗಸ್ಟ್ ನಿಂದ 7 ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆ ಮಾಡಲಾಗಿದೆ. ಆದರೆ,‌ ಇತ್ತೀಚಿನ 25 ತಿಂಗಳಲ್ಲಿ ನಿವೃತ್ತರಾದ ನೌಕರರಿಗೆ ಡಿಸಿಆರ್ ಜಿ, ಕಮ್ಯುಟೇಶನ್, ಗಳಿಕೆ ರಜೆಯನ್ನು ಲೆಕ್ಕಾಚಾರ ಮಾಡುವಲ್ಲಿ ತಪ್ಪಲಾಗಿದೆ. ಇದರಿಂದ ರಾಜ್ಯದ ಸುಮಾರು 17 ಸಾವಿರ ನಿವೃತ್ತ ನೌಕರರಿಗೆ 5 ರಿಂದ 20 ಲಕ್ಷ‌ ರೂ. ವರೆಗೂ ಸೌಲಭ್ಯ ನಷ್ಟವಾಗಲಿದೆ. ಸಮಸ್ಯೆಯನ್ನು ಈಗಾಗಲೇ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ತಕ್ಷಣ ಪರಿಷ್ಕೃತ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಸಂಚಾಲಕ ಬಿ.ಡಿ.ನಾಯ್ಕ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net