29ರಂದು ರಿಸರ್ವ್ ಬ್ಯಾಂಕ್ ಎದುರು ಪ್ರತಿಭಟನೆ

23M.D.R.3
ರಿಸರ್ವ್ ಬ್ಯಾಂಕ್ ಎದುರು ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ಪೂರ್ವಭಾವಿ ಸಭೆಯನ್ನು ಮದ್ದೂರು ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿತ್ತು. ವಿ.ಸಿ.ಉಮೇಶ್, ಲಿಂಗಪ್ಪಾಜಿ, ವರದಪ್ಪ, ಅಶೋಕ್, ರವಿ ಇದ್ದರು.
Published on

ಮದ್ದೂರು: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ ಹಾಗೂ ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ಕಿರುಕುಳ ತಡೆಗಟ್ಟುವಂತೆ ಒತ್ತಾಯಿಸಿ ರೈತ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಸಂಘಟನೆ ತಾಲೂಕು ಅಧ್ಯಕ್ಷ ವಳಗೆರೆಹಳ್ಳಿ ವಿ.ಸಿ.ಉಮೇಶ್ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಆಯೋಜಿಸಿದ್ದ ರಿಸರ್ವ್ ಬ್ಯಾಂಕ್ ಎದುರು ನಡೆಯುವ ರೈತರ ಬೃಹತ್ ಪ್ರತಿಭಟನೆ ಹಾಗೂ ಮೈಕ್ರೋ ಫೈನಾನ್ಸ್ ಹಾವಳಿ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜ.29ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎದುರು ಪ್ರತಿಭಟನೆ ಆಯೋಜಿಸಿದ್ದು ರೈತರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕೋರಿದರು.

ಸಂಘಟನೆ ಪದಾಧಿಕಾರಿಗಳಾದ ಶಂಕರೇಗೌಡ, ಲಿಂಗಪ್ಪಾಜಿ, ಗೊಲ್ಲರದೊಡ್ಡಿ ಅಶೋಕ್, ರವಿಕುಮಾರ್, ಚಂದ್ರು, ರಾಮಕೃಷ್ಣಯ್ಯ, ವಿನೋದ್, ಚನ್ನಪ್ಪ, ಕೃಷ್ಣ, ಸಿದ್ದೇಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net