29ರಿಂದ ಶಿಮುಲ್ ಎದುರು ಪ್ರತಿಭಟನೆ

megharaj
ಟಿ.ಡಿ.ಮೇಘರಾಜ್, ಬಿಜೆಪಿ ಜಿಲ್ಲಾಧ್ಯಕ್ಷ
Published on

ಶಿವಮೊಗ್ಗ: ರಾಜ್ಯ ಸರ್ಕಾರ ದಿನಕ್ಕೊಂದು ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ಈಗ ಹಾಲಿನ ದರ ಹೆಚ್ಚಿಸುವ ಮೂಲಕ ಜನರಿಗೆ ಬರೆ ಎಳೆದಿದೆ. ಹಾಲಿನ ಬೆಲೆಯನ್ನು ಯಥಾಸ್ಥಿತಿಗೆ ಇಳಿಸದೇ ಇದ್ದರೆ ಜೂ. 29ರಿಂದ ಶಿಮುಲ್(ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ) ಎದುರು ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಎಚ್ಚರಿಸಿದ್ದಾರೆ.

ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸರ್ಕಾರ ಹೆಣಗಾಡುತ್ತಿದೆ. ಅಧಿಕಾರಕ್ಕೆ ಬಂದ ಬಳಿಕ ಮುದ್ರಾಂಕ ಶುಲ್ಕ, ಆರ್‌ಟಿಒ ಶುಲ್ಕ, ಇಂಧನ ಬೆಲೆ ಹೆಚ್ಚಳ ಮಾಡಿದ್ದ ಸರ್ಕಾರ ಈಗ ಹಾಲಿನ ದರವನ್ನೂ ಹೆಚ್ಚಿಸಿದೆ. ನಿತ್ಯಬಳಕೆ ಮಾಡುವ ಹಾಲಿನ ದರ ಹೆಚ್ಚಿಸಿರುವುದು ಸರ್ಕಾರದ ದುಷ್ಟತನ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.
ಲೋಕಸಭೆ ಚುನಾವಣೆಯಲ್ಲಿ ಮತದಾರರು ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಬೆಂಬಲ ನೀಡಿಲ್ಲ. ಕಡಿಮೆ ಸೀಟು ಬಂದಿರುವ ಕಾರಣ ಕಾಂಗ್ರೆಸ್ ರಾಜ್ಯದ ಜನರ ಮೇಲೆ ಹಗೆ ತೀರಿಸಲು ಮುಂದಾಗಿದೆ. ಗ್ಯಾರಂಟಿ ಯೋಜನೆಗಳಿಂದ ಖಾಲಿಯಾಗಿರುವ ಬೊಕ್ಕಸ ತುಂಬಿಸಲು ಎಲ್ಲ ವಸ್ತುಗಳ ದರ ಏರಿಕೆ ಮಾಡುತ್ತಿದೆ. ಇದರಿಂದ ಹೈನುಗಾರರಿಗೆ ನಯಾಪೈಸೆ ಪ್ರಯೋಜನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net