ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ

Protest in Mysore against former MP Ramesh Katti
Published on

ಮೈಸೂರು: ವಾಲ್ಮೀಕಿ ಸಮಾಜವನ್ನು ಅಶ್ಲೀಲಪದದಿಂದ ನಿಂದಿಸಿದ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ರಾಜ್ಯ ನಾಯಕರ ಯುವ ಸೇನೆ ವತಿಯಿಂದ ಪುರಭವನ ಮುಂಭಾಗದ ಅಂಬೇಡ್ಕರ್ ಪ್ರತಿಮೆ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಯಿತು.

ಬೆಳಗಾವಿ ಜಿಲ್ಲೆಯ ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭ ರಮೇಶ್ ಕತ್ತಿ ಉದ್ದೇಶಪೂರ್ವಕವಾಗಿ ಬೇಡ ಜನಾಂಗದವರ ವಿರುದ್ಧ ಅಶ್ಲೀಲ ಪದ ಬಳಸಿ ಸಮುದಾಯವನ್ನು ಅಪಮಾನಿಸಿದ್ದಾರೆ. ಇದು ಸಾಮಾಜಿಕ ಜಾಲತಾಣ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಬಿತ್ತರಗೊಂಡಿದ್ದು, ಸುಮಾರು 70 ಲಕ್ಷಕ್ಕೂ ಅಧಿಕ ಜನಸಂಖ್ಯೆಯುಳ್ಳ ನಾಯಕ ಸಮುದಾಯದ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದೆ. ರಮೇಶ್ ಕತ್ತಿ ಮೇಲು-ಕೀಳು ಭಾವನೆಗಳನ್ನು ಬಿತ್ತುತ್ತಿದ್ದು, ಡಾ.ಬಿ.ಆರ್.ಅಂಬೇಡ್ಕರ್ ರಚನೆಯ ಸಂವಿಧಾನದ ಆಶಯವನ್ನು ಗಾಳಿಗೆ ತೂರುತ್ತಿದ್ದಾರೆ ಎಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು ಆಕ್ರೋಶ ವ್ಯಕ್ತಪಡಿಸಿದರು.

ರಮೇಶ್ ಕತ್ತಿ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆ ಪದಾಧಿಕಾರಿಗಳಾದ ದೇವರಾಜು ಟಿ.ಕಾಟೂರು, ಶಿವಕುಮಾರಸ್ವಾಮಿ, ಲೋಕೇಶ್ ಪಿಯಾ, ಸಿ.ಸ್ವಾಮಿ, ಎಡತಲೆ ಶಿವಕುಮಾರ್, ಪಿ.ಎಲ್.ಸ್ವಾಮಿ, ವಿಜಯ್ ಕುಮಾರ್, ನೃಪತುಂಗ, ಶಿವಕುಮಾರ್, ಸುರೇಶ್, ಶಾಂತರಾಜು, ಶಿವಣ್ಣ, ಮಹದೇವು, ಅಂಕಯ್ಯ, ಪ್ರಕಾಶ್ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net