

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಏಕವಚನದಲ್ಲಿ ಮಾತನಾಡಿದ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸಿದರು.
ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ಸಂಸದ ಅನಂತಕುಮಾರ್ ಹೆಗಡೆ ಭಾವಚಿತ್ರಕ್ಕೆ ಬೆಂಕಿ ಹಾಕಿ, ಚಪ್ಪಲಿಯಲ್ಲಿ ತುಳಿದು ಸಿದ್ದರಾಮಯ್ಯ ಅಭಿಮಾನಿಗಳು ಆಕ್ರೊಶ ಹೊರಹಾಕಿದರು.
ಓರ್ವ ಸಂಸದರಾಗಿ ಮುಖ್ಯಮಂತ್ರಿಗಳ ಬಗ್ಗೆ ಹೇಗೆ ಮಾತನಾಡಬೇಕು ಎನ್ನುವ ಜ್ಞಾನ ಇಲ್ಲವೇ? ಸಂಸದ ಸ್ಥಾನದಲ್ಲಿ ಇದ್ದು ಏನು ಬೇಕಾದರೂ ಮಾತನಾಡಬಹುದೆ ಎಂದು ಪ್ರಶ್ನಿಸಿದರು. ಈ ಬಾರಿ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪುವ ಭೀತಿಯಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಸಿದ್ದರಾಮಯ್ಯನವರ ಬಗ್ಗೆ ಮಾತನಾಡುವಾಗ ಯೋಚಿಸಿ ಮಾತನಾಡಬೇಕು. ಸಿದ್ದರಾಮಯ್ಯನವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ಅದನ್ನು ಸಹಿಸದೇ ರೀತಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಕೆ.ಎಸ್.ಶಿವರಾಂ, ಎಸ್.ಯೋಗೇಶ್ ಉಪ್ಪಾರ, ಲೋಕೇಶ್ ಕುಮಾರ್, ಎಚ್.ಎಸ್.ಪ್ರಕಾಶ್, ರವಿನಂದನ್, ರವಿ, ರಾಜಶೇಖರ್, ಸುನಿಲ್ ನಾರಾಯಣ್, ಶ್ರೀನಿವಾಸ್, ಚಂದ್ರಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.