ಕಾರ್ಖಾನೆ ದುಡಿಮೆ ಅವಧಿ ಹೆಚ್ಚಳಕ್ಕೆ ಖಂಡಿಸಿ ಪ್ರತಿಭಟನೆ

CITU
Published on

ಮೈಸೂರು: ರಾಜ್ಯದ ಕಾರ್ಖಾನೆಗಳಲ್ಲಿ ದಿನದ ಕೆಲಸದ ಅವಧಿಯನ್ನು ಗರಿಷ್ಠ 9 ರಿಂದ 12 ಗಂಟೆಗೆ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಕೆಲಸ ಅವಧಿ ಹೆಚ್ಚಳ ಹಾಗೂ ದುಡಿಯುವ ಮಹಿಳೆಯರನ್ನು ರಾತ್ರಿ ಪಾಳಿಯಲ್ಲಿ ದುಡಿಸಿಕೊಳ್ಳಲು ಅವಕಾಶ ಕಲ್ಪಿಸಿ ಕಾರ್ಖಾನೆ ಕಾಯ್ದೆ 1948ಕ್ಕೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕರಿಸಿರುವುದು ಖಂಡನೀಯ. ಇದು ಚುನಾವಣೆ ಹೊಸ್ತಿಲಿನಲ್ಲಿ ಬಂಡವಳದಾರರನ್ನು ಓಲೈಸುವ ಕ್ರಮವಾಗಿದೆ. ಕಾರ್ಮಿಕ ವಿರೋಧಿಯಾಗಿರುವ ಈ ವಿಧೇಯಕವನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸಿಐಟಿಯು ಪದಾಧಿಕಾರಿಗಳಾದ ಜಿ.ಜಯರಾಂ, ಎಚ್.ಎಸ್. ಜಗದೀಶ, ಎಂ.ಅಪ್ಪಣ್ಣ, ಎನ್.ಕೆ. ಬಾಲಾಜಿ ರಾವ್, ಮೆಹಬೂಬ್, ಧನಂಜಯ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net