ಹಿಂದಿ ಹೇರಿಕೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

mysore kannada sangha
Published on

ಮೈಸೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ಮಾಡುವ ಪ್ರಯತ್ನ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಕೂಡಲೇ ಹಿಂದಿ ಹೇರಿಕೆ ನೀತಿಯನ್ನು ಕೈ ಬಿಡಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ನ್ಯಾಯಾಲಯ ಮುಂಭಾಗದ ಗಾಂಧಿ ಪುತ್ಥಳಿ ಎದುರು ಪ್ರತಿಭಟನೆ ನಡೆಯಿತು.

ಬ್ಯಾಂಕ್, ಅಂಚೆ ಕಚೇರಿ ಸೇರಿದಂತೆ ಕೇಂದ್ರ ಸರ್ಕಾರದ ಕಚೇರಿಗಳು ಹಿಂದಿ ಮಯವಾಗಿದ್ದು, ಅಲ್ಲಿ ಕನ್ನಡಿಗರಿಗೆ ವ್ಯವಹರಿಸಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲೂ ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಬೇಕು. ವಿವಿಧ ಹುದ್ದೆಗಳ ನೇಮಕಾತಿಗೆ ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ ಪರೀಕ್ಷೆ ಹಮ್ಮಿಕೊಂಡಿದ್ದು, ಈ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ನಡೆಸುತ್ತಿರುವುದು ಖಂಡನೀಯ. ಕನ್ನಡಿಗರಿಗೆ ಕನ್ನಡದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆಯಾಗಿದ್ದು, ಕನ್ನಡದ ಮೇಲೆ ಹಿಂದಿ ಭಾಷೆ ಹೇರಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಮಿತಿ ಪದಾಧಿಕಾರಿಗಳಾದ ಮೂಗೂರು ನಂಜುಂಡಸ್ವಾಮಿ, ತಾಯೂರು ವಿಠಲಮೂರ್ತಿ, ಸಿದ್ದಲಿಂಗಪ್ಪ, ಮಲ್ಲಣ್ಣ, ಬಸಪ್ಪ, ನಾಗರಾಜ್ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net