ಅರವಿಂದ್ ಕೇಜ್ರಿವಾಲ್ ಬಿಡುಗಡೆಗೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ

Protest in Mysore demanding release of Arvind Kejriwal
Published on

ಮೈಸೂರು: ಜಾರಿ ನಿರ್ದೇಶನಾಲಯ (ಇಡಿ) ಬಂಧನದಿಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಡುಗಡೆಗೆ ಆಗ್ರಹಿಸಿ ನಗರದ ಗಾಂಧಿ ಚೌಕದಲ್ಲಿ ಆಮ್ ಆದ್ಮಿ ಪಾರ್ಟಿ (ಎಎಪಿ) ಕಾರ್ಯಕರ್ತರು ಭಾನುವಾರ ನಿರಶನ ನಡೆಸಿದರು.

ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಸಂಚು ರೂಪಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನಕ್ಕೆ ಒಳಗಾಗುವಂತೆ ಮಾಡಿದೆ. ಕೇಜ್ರಿವಾಲ್ ಅವರ ಜನಪ್ರೀಯತೆ ಸಹಿಸಿಕೊಳ್ಳಲು ಸಾಧ್ಯವಾಗದೆ ಅವರನ್ನು ಬಂಧಿಸಲಾಗಿದೆ. ದೇಶದಲ್ಲಿ ಬಿಜೆಪಿ ವಿರುದ್ಧದ ಅಲೆ ಹೆಚ್ಚಾಗುತ್ತಿದ್ದು, ಎನ್‌ಡಿಎ ಮೈತ್ರಿಕೂಟದ ವಿರುದ್ಧ ಜನ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆಯ ಸಂದರ್ಭದಲ್ಲಿಯೇ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಪಕ್ಷದ ಕಾರ್ಯಕರ್ತರು ಒತ್ತಾಯಿಸದರು.

ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಮುಖಂಡರಾದ ಮಾಲವಿಕ ಗುಬ್ಬಿವಾಣಿ, ರಂಗಯ್ಯ, ವಿಶ್ವನಾಥ್ ಕುಲಕರ್ಣಿ, ಉಮಾ ಸಂಪತ್ ಕುಮಾರ್, ಐಶ್ವರ್ಯ, ನಟರಾಜು, ನಾಗರಾಜು, ನವೀನ್, ಧರ್ಮಶ್ರೀ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net