

ಕಡೂರು: ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ಮತ್ತು ಬೇಡಿಕೆ ಈಡೇರಿಕೆಗಾಗಿ ಹಮ್ಮಿಕೊಂಡಿರುವ ಮುಷ್ಕರ ಮಂಗಳವಾರವೂ ಮುಂದುವರಿಸಿದೆ.
ತಾಲೂಕು ಘಟಕದ ಅಧ್ಯಕ್ಷ ಎಸ್.ಕೆ. ರವೀಂದ್ರ ಮಾತನಾಡಿ, ನಾನಾ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಕಳೆದ 2024ರ ಸೆಪ್ಟಂಬರ್‌ನಲ್ಲಿ ಮುಷ್ಕರ ನಡೆಸಿದಾಗ ಸರ್ಕಾರ ಬೇಡಿಕೆ ಈಡೇರಿಕೆಗೆ ಭರವಸೆ ನೀಡಿತ್ತು. ಆದರೆ ಇದುವರೆಗೆ ಬೇಡಿಕೆ ಈಡೇರಿಸಿಲ್ಲ. ನಮ್ಮ ಹಕ್ಕಿಗಾಗಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದರು.
ಸಾರ್ವಜನಿಕರಿಗೆ ನೇರವಗಿ ಸೇವೆ ನೀಡುವ ಗ್ರಾಮಾಡಳಿತ ಅಕಾಧಿರಿಗಳಿಗೆ ಕಚೇರಿ ಸೌಲಭ್ಯ, ಮಹಿಳಾ ಗ್ರಾಮ ಆಡಳಿತಾಧಿಕಾರಿಗಳಿಗೆ ಸುರಕ್ಷತಾ ಸೌಲಭ್ಯಗಳು, ಕುಟುಂಬದೊಂದಿಗೆ ನೆಮ್ಮದಿ ಜೀವನ ಸಾಗಿಸಲು ಅಂತರ ಜಿಲ್ಲಾ ವರ್ಗಾವಣೆ, ಬಡ್ತಿ ನೀಡುವ ಬಗ್ಗೆ ಹಾಗೂ ಸರ್ಕಾರದ ಎಲ್ಲ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಗ್ರಾಮ ಆಡಳಿತಾಧಿಕಾರಿಗಳಿಗೆ ಕಾನೂನು ರಕ್ಷಣೆ ಮತ್ತು ಮೇಲಾಕಾರಿಗಳಿಂದ ಶೋಷಣೆ ತಪ್ಪಿಸುವ ಜತೆಗೆ ಸೂಕ್ತ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.
ಕಂದಾಯ ಇಲಾಖೆ ಕಾರ್ಯಕ್ರಮಗಳ ಯೋಜನೆಗಳನ್ನು ತಳಮಟ್ಟದಲ್ಲಿ ಅನುಷ್ಟಾನಗೊಳಿಸುವ ಹೊಣೆ ಗ್ರಾಮ ಆಡಳಿತ ಅಧಿಕಾರಿಗಳ ಮೇಲಿದ್ದು, ಅವರಿಗೆ ಮೂಲ ಸೌಕರ್ಯ ಕಲ್ಪಿಸುವಲ್ಲಿ ಹಿಂದೇಟು ಹಾಕಲಾಗುತ್ತಿದೆ. ಮೊಬೈಲ್, ಲ್ಯಾಪ್‌ಟ್ಯಾಪ್ ಮತ್ತು ಡೇಟ ಪ್ಯಾಕ್‌ಗಳನ್ನು ನೀಡಿಲ್ಲ. ಸರ್ಕಾರದ ಯೋಜನೆಗಳನ್ನು ಸ್ವಂತ ಖರ್ಚಿನಲ್ಲಿ ಮಾಡಬೇಕಾದ ಪರಿಸ್ಥಿತಿಗಳು ನಿರ್ಮಾಣವಾಗಿದೆ. ನಮ್ಮ ಬೇಡಿಕೆ ಈಡೇರಿಸುವವರೆಗೂ ಅರ್ನಿಷ್ಟಾವಗೆ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ ಎಂದರು.
ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ, ತಾಲೂಕು ಉಪಾಧ್ಯಕ್ಷ ಬಿ.ಎಂ.ರಮೇಶ್, ಪ್ರಧಾನ ಕಾರ್ಯದರ್ಶಿ ಸಂತೋಷ್‌ಕುಮಾರ್, ಜಿಲ್ಲಾ ಪ್ರಧಾನ ಸಂಚಾಲಕ ಎಚ್.ಸಿದ್ದಪ್ಪ, ಲಿಂಗರಾಜು, ಶತಿ, ತೇಜಸ್, ಸುಮ, ಪ್ರತಿಭಾ, ರಂಜಿತಾ ಮತ್ತಿತರಿದ್ದರು.