

ನಾಗಮಂಗಲ: ಮಾಜಿ ಸೈನಿಕ ಸಾಗುವಳಿ ಮಾಡುತ್ತಿದ್ದ ಜಮೀನನ್ನು ಬಲಾಢ್ಯರು ಬೆದರಿಸಿ ಕೊಲೆಗೆ ಯತ್ನಿಸುವ ಮೂಲಕ ಜಮೀನನ್ನು ಕಬಳಿಸಲು ಮುಂದಾಗಿದ್ದು, ಮಾಜಿ ಸೈನಿಕನಿಗೆ ರಕ್ಷಣೆ ನೀಡುವ ಜತೆಗೆ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿ ಮಾಜಿ ಸೈನಿಕರು ಪಟ್ಟಣದಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿದರು. ತಹಸೀಲ್ದಾರ್ ನಂದೀಶ್ ಅವರಿಗೆ ಮನವಿ ಸಲ್ಲಿಸಿದರು.
ತಾಲೂಕಿನ ದೇವಲಾಪುರ ಹೋಬಳಿಯ ಎಚ್.ಎನ್.ಕಾವಲ್‌ನಲ್ಲಿ ಮಾಜಿ ಸೈನಿಕ ಜಯರಾಮ್ ಉಳುಮೆ ಮಾಡುತ್ತಿರುವ ಜಮೀನನ್ನು ಪ್ರಭಾವಿಗಳು ಕಬಳಿಸಲು ಮುಂದಾಗಿದ್ದು, ಮಾಜಿ ಸೈನಿಕ ಹಾಗೂ ಕುಟುಂಬದವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಕುರಿತಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು ಸಹ ಇದುವರೆಗೂ ಯಾವುದೇ ಕ್ರಮವಾಗಿಲ್ಲ. ಕೂಡಲೇ ತಪ್ಪಿತಸ್ಥರನ್ನು ಬಂಧಿಸುವ ಜತೆಗೆ ಮಾಜಿ ಸೈನಿಕನಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ತಹಸೀಲ್ದಾರ್ ಹಾಗೂ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಟಿಬಿ ಬಡಾವಣೆಯ ಬಿಜಿಎಸ್ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನೆ ಜಾಥಾ ನಡೆಸಲಾಯಿತು. ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮರೀಗೌಡ, ಬಿ.ನಾರಾಯಣ್, ಕುಮಾರ, ಪ್ರಕಾಶ್, ಮೂಡಲಗಿರಿ, ನಾಗರಾಜ್ ಸೇರಿದಂತೆ ಮತ್ತಿತರಿದ್ದರು.