ಬೆಲೆ ಏರಿಕೆ ಖಂಡೀಸಿ ಏ.೦೭ ರಿಂದ ಜನಾಕ್ರೋಶ ಯಾತ್ರೆ

VEERANGOUDA LEKIKIHAL
VEERANGOUDA LEKIKIHAL
Published on

ರಾಯಚೂರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಽಕಾರಕ್ಕೆ ಬಂದಮೇಲೆ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಬದುಕು

ದುರ್ಬಲಗೊಳಿಸುವುದರ ಜತೆಗೆ ಎಸ್ಟಿ,ಎಸ್ಸಿ ಮೀಸಲು ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಏ.೭ರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಗುತ್ತಿದೆ ಎಂದು ಬಿಜೆಪಿ ಜಿ¯್ಲÁಧ್ಯಕ್ಷರಾದ ವೀರನಗೌಡ ಪಾಟೀಲ ಲೇಕ್ಕಿಹಾಳ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಈ ಹೋರಾಟಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಏ.೨ರಂದು ಬೆಲೆ ಏರಿಕೆಯ ವಿರುದ್ಧ ಅಹೋರಾತ್ರಿ ಧರಣಿ ನಡೆಯಲಿದೆ ಎಂದರು.

ಬಿಜೆಪಿಯ ಎಲ್ಲ ಶಾಸಕರು ಸೇರಿದಂತೆ ಕಾರ್ಯಕರ್ತರು ಈ ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಳ್ಳಲಿz್ದÁರೆ ಎಂದರು. ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಓಲೈಕೆ ಮಾತ್ರವಲ್ಲದೆ ಹಿಂದೂಗಳಿಗೆ ಅಪಮಾನ ಮಾಡಲಾಗಿದೆ. ಸರ್ಕಾರಿ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಶೇ ೪ ಮೀಸಲಾತಿ ನೀಡಿದ್ದು, ಕಾನೂನಿನ ವಿರುದ್ಧವಾಗಿದೆ ಎಂದು ಆರೋಪಿಸಿದರು.

ಗ್ಯಾರಂಟಿ ಹೆಸರಲ್ಲಿ ರಾಜ್ಯದ ಖಜಾನೆ ದಿವಾಳಿಯಾಗಿದೆ. ಕಾಂಗ್ರೆಸ್ ಸರ್ಕಾರ ಅಽಕಾರಕ್ಕೆ ಬಂದ ನಂತರ ಹಾಲಿನ ದರ

೯ ರೂ ಏರಿಕೆಯಿಂದ ಬಡವರ ಬದುಕನ್ನು ದುರ್ಬಲಗೊಳಿಸುತ್ತಿದೆ. ಸುಮಾರು ೬೬೨ ಕೋಟಿ ರೈತರ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಬಸವನ ಗೌಡ ಬ್ಯಾಗವಾಟ, ಎನ್.ಶಂಕ್ರಪ್ಪ, ರಾಘವೇಂದ್ರ ಊಟ್ಕೂರು,ರವೀAದ್ರ ಜಲ್ದಾರ್,ಶಂಕರರೆಡ್ಡಿ ಇದ್ದರು.

 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net