ರೈತರ ವಿವಿಧ ಬೇಡಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ

Protest
Published on

ಮೈಸೂರು: ತೆಲಂಗಾಣ ಮತ್ತು ಪಂಜಾಬ್ ಮಾದರಿಯಲ್ಲಿ ರಾಜ್ಯ ಸರ್ಕಾರ ಬರ ಮತ್ತು ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಒತ್ತಾಯಿಸಿದರು.

ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ 6,040 ಕೃಷಿ ಪತ್ತಿನ ಸಹಕಾರ ಸಂಘಗಳ ಸರಿ ಸುಮಾರು 25,000 ಕೋಟಿ ರೂ. ಬೆಳೆ ಸಾಲವನ್ನು ಮನ್ನಾ ಮಾಡಬೇಕು. ಕಳೆದ ಸಾಲಿನ ಕಬ್ಬಿನ ಬಾಕಿ ಪ್ರತಿ ಟನ್‌ಗೆ 150 ರು.ನಂತೆ 950 ಕೋಟಿ ರೂ.ಗಳನ್ನು ರೈತರಿಗೆ ಕಾರ್ಖಾನೆಗಳಿಂದ ಕೊಡಿಸಬೇಕು. ಇಲ್ಲವಾದರೆ ಸರ್ಕಾರವೇ ನೀಡಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net