ಮಂಡ್ಯದಲ್ಲಿ ಬಿಗಡಾಯಿಸಿದ ವಿದ್ಯುತ್ ಸಮಸ್ಯೆ: ಚೆಸ್ಕಾಂಗೆ ರೈತರ ಮುತ್ತಿಗೆ

Protest of farmers mandya
Published on

ಮಂಡ್ಯ: ಸಾತನೂರು ಗ್ರಾಮದ ಕಾಡಾ ಫಾರ್ಮ್ ವ್ಯಾಪ್ತಿಯ ಪ್ರದೇಶಕ್ಕೆ ನಿರಂತರ ಸರಬರಾಜಾಗುತ್ತಿದ್ದ ವಿದ್ಯುತ್ ಪೂರೈಕೆ ಸ್ಥಗಿತ ಮಾಡಿರುವುದನ್ನು ವಿರೋಧಿಸಿ ತಾಲೂಕಿನ ಸಾತನೂರು ಗ್ರಾಮಸ್ಥರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಚೆಸ್ಕಾಂನ ಅಧೀಕ್ಷಕ ಇಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಕಾಡಾ ಫಾರ್ಮ್ ವ್ಯಾಪ್ತಿಯ ಐಪಿ ಸೆಟ್, ಫೌಟ್ರಿ ಫಾರ್ಮ್, ರೇಷ್ಮೆ ಸಾಕಾಣಿಕೆ ಮನೆಗಳಿಗೆ ಕಳೆದ ನಾಲ್ಕು ದಶಕದಿಂದ ಮಂಡ್ಯ ನಗರದ ಫೀಡರ್ ನಿಂದ ವಿದ್ಯುತ್ ಸರಬರಾಜು ಮಾಡಲಾಗುತ್ತಿತ್ತು. ಆದರೆ ಇದನ್ನು ಕಡಿತ ಮಾಡಿ ಗ್ರಾಮಾಂತರ ಪ್ರದೇಶದ ಬಸವನಪುರ ಫೀಡರ್‌ನಿಂದ ವಿದ್ಯುತ್ ನೀಡಲಾಗುತ್ತಿದೆ. ಆದರೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದಿರುವುದರಿಂದ ರೈತರಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದರು.

ಕೆಆರ್‌ಎಸ್ ಡ್ಯಾಂನಲ್ಲಿ ನೀರಿನ ಕೊರತೆ ಮತ್ತು ಬರ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಬೆಳೆಗೆ ಕೊಳವೆ ಬಾವಿಗಳಿಂದ ನೀರು ಪೂರೈಸಲು ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್ ಅವಶ್ಯಕವಾಗಿದೆ. ಆ ನಿಟ್ಟಿನಲ್ಲಿ ಈ ಹಿಂದಿನಂತೆ ಮಂಡ್ಯ ಫೀಡರ್‌ನಿಂದ ವಿದ್ಯುತ್ ಸರಬರಾಜು ಮಾಡುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಾತನೂರು ಗ್ರಾಮದ ಮಹೇಶ್, ದೇವರಾಜ್, ಅಶೋಕ್, ಉಮೇಶ್, ರವಿ, ಜಗದೀಶ್, ರಾಮಲಿಂಗ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net