ಬೃಹತ್ ಪ್ರತಿಭಟನೆ 18ರಂದು

PROTEST
Published on

ಹಳಿಯಾಳ: ಪಟ್ಟಣದ ತಾಲೂಕು ಆಸ್ಪತ್ರೆಗೆ ಗುಣಮಟ್ಟದ ಔಷಧ ಮತ್ತು ಸಲಕರಣೆ ವಿತರಣೆ ಮತ್ತು ಹೆರಿಗೆ ವಿಭಾಗದ ಸ್ತ್ರೀ ತಜ್ಞ ವೈದ್ಯೆಯನ್ನು ಬದಲಿಸಲು ಸಾಕಷ್ಟು ಬಾರಿ ಮನವಿ ಮಾಡಲಾಗಿದೆ. ಆದರೆ, ತಾಲೂಕಾಡಳಿತ ಮತ್ತು ಜಿಲ್ಲಾಡಳಿತದಿಂದ ಯಾವುದೇ ಕ್ರಮ ಕೈಗೊಂಡಿಲ್ಲ. ಇದನ್ನು ವಿರೋಧಿಸಿ ಆ. 18ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿ (ಕೆಂಪು ಸೇನೆ) ಹಳಿಯಾಳ ತಾಲೂಕು ಅಧ್ಯಕ್ಷ ಚಂದ್ರಕಾಂತ ಕಲಭಾವಿ ಎಚ್ಚರಿಕೆ ನೀಡಿದ್ದಾರೆ.

ಪ್ರಕಟಣೆ ನೀಡಿರುವ ಅವರು, ಜೂ. 26ರಂದು ನಿಯೋಗದೊಂದಿಗೆ ಭೇಟಿ ನೀಡಿ ಮನವಿ ಸಲ್ಲಿಸಲಾಗಿದೆ. ಆದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸಣ್ಣಪುಟ್ಟ ಸಮಸ್ಯೆಗಳಿಗೂ ರೋಗಿಗಳನ್ನು ಧಾರವಾಡದ ಸಿವ್ಹಿಲ್ ಆಸ್ಪತ್ರೆಗೆ ಶಿಫಾರಸು ಮಾಡಲಾಗುತ್ತಿದೆ. ಅದನ್ನು ಸ್ಥಗಿತಗೊಳಿಸಿ ಸ್ಥಳೀಯವಾಗಿಯೇ ಚಿಕಿತ್ಸೆ ನೀಡಬೇಕು. ಡಯಾಲಿಸಿಸ್ ಕೇಂದ್ರದಲ್ಲಿ ಕಳಪೆ ಮಾತ್ರೆಗಳನ್ನು ನೀಡಲಾಗುತ್ತಿದೆ ಎಂಬು ದೂರುಗಳವೆ. ತಕ್ಷಣದಿಂದಲೇ ಗುಣಮಟ್ಟದ ಮಾತ್ರೆ, ಔಷಧ ಮತ್ತು ಗುಣಮಟ್ಟದ ಕೈಗವಸುಗಳನ್ನು ಸರಬರಾಜು ಮಾಡಬೇಕು. ಆ. 18ರಂದು ಯಲ್ಲಾಪುರ ನಾಕಾದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಪ್ರತಿಭಟನಾ ಮೆರವಣಿಗೆ ಮೂಲಕ ಇಲ್ಲಿಯ ತಾಲೂಕು ಆಸ್ಪತ್ರೆಗೆ ತೆರಳಿ ಆಸ್ಪತ್ರೆ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ಚಂದ್ರಕಾಂತ ಕಲಭಾವಿ, ಸಂಘಟನೆಯ ಉತ್ತರ ಕರ್ನಾಟಕ ಅಧ್ಯಕ್ಷ ವಿ.ಬಿ. ರಾಮಚಂದ್ರ, ಪ್ರಧಾನ ಕಾರ್ಯದರ್ಶಿ ಗಣೇಶ ಅಂಬೊಳ್ಳಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net