

ಮಸ್ಕಿ: ರಾಜ್ಯದ ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ಸರ್ಕಾರದಿಂದ ಅನ್ಯಾಯವಾಗುತ್ತಿದ್ದು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆ.12ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಹಾಲಾಪುರ ಮನವಿ ಮಾಡಿದ್ದಾರೆ.
ಪಟ್ಟಣದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016 ಕ್ಕಿಂತ ಮೊದಲು ನೇಮಕಾತಿ ಆದವರಿಗೆ ಅನ್ವಯಿಸಬಾರದು.
ಇದನ್ನು ಓದಿ: ರಾಜ್ಯಪಾಲರ ವಿರುದ್ಧ ಪ್ರತಿಭಟನೆ
ಇದರಿಂದ ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು. ಮುಖ್ಯಶಿಕ್ಷಕ ಹುದ್ದೆಗೆ ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಆಗ್ರಹಿಸಿದರು.
ನಿಕಟಪೂರ್ವ ತಾಲೂಕು ಅಧ್ಯಕ್ಷ ಬಾಲಸ್ವಾಮಿ ಹಂಪನಾಳ, ಶಿಕ್ಷಕರಾದ ಹುಸೇನಸಾಬ ಗುರಿಕಾರ, ಅಜರುದ್ದೀನ್ ಬಳಗಾನೂರು, ಅಮರೇಶ ಜಿ., ಚನ್ನವೀರ ಜೋತಾನ್, ಅರವಿಂದ ಪಾಟೀಲ ಇತರರು ಇದ್ದರು.