ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೇ 15 ರಂದು ಪ್ರತಿಭಟನೆ

NARASIMHA NAYAK
NARASIMHA NAYAK
Published on

ರಾಯಚೂರು ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೇ 15 ರಂದು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ನರಸಿಂಹ ನಾಯಕ ಕಮಲಾಪುರು ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ, ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ ಕಾರ್ಟ್, ಡಿಜಿಟಲ್ ಮೀಟರ್, ಅಳವಡಿಸಲು 10 ಸಾವಿರ ರೂ.ಗಳ ಡಿಪೋಜಿಟ್ ಶುಲ್ಕವನ್ನು ನಿಗಧಿಪಡಿಸಿರುವುದನ್ನು ಹಿಂಪಡೆಯಬೇಕು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ಮಾಡಿರುವ ಯತ್ನವನ್ನು ನಿಲ್ಲಿಸಬೇಕು. ರೈತರಿಗೆ ವಿದ್ಯುರ್ ಪರಿಕರಗಳನ್ನು ಅಕ್ರಮ-ಸಕ್ರಮ ಅಡಿಯಲ್ಲಿ ಈ ಹಿಂದೆ ನೀಡಿದಂತೆಯೇ ರೈತರ ಉಚಿತ ವಿದ್ಯುತ್‌ನ್ನು ಗೌರವದಿಂದ ನೀಡಬೇಕು.

ವಿದ್ಯುತ್ ಸಂಪರ್ಕಕ್ಕೆ ರೈತರ ಆಧಾರ ಜೋಡನೆ ಮಾಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಯಲ್ಲಿ ಹಮ್ಮಿಕೊಂಡಿದ್ದು, ಅಂದು ಪ್ರತಿಭಟನಾ ಮೆರವಣಿಗೆಯು ನಗರದ ಬಸವೇಶ್ವರ ವೃತ್ತದಿಂದ ಜೆಸ್ಕಾಂ ಕಾರ್ಯಾಲಯದವರೆಗೆ ನಡೆಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಧರ್ಮರೆಡ್ಡಿ, ಶಿವಪ್ಪ, ಮಲ್ಲನಗೌಡ, ನರಸಿಂಹ ರೆಡ್ಡಿ ಗಾಜರಾಳ, ತಾಯಪ್ಪ ಕಮಲಾಪುರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net