

ಮಂಗಳೂರು: ಸಿಡಿಯಲ್ಲಿರುವ ವ್ಯಕ್ತಿ ರಮೇಶ್ ಜಾರಕಿಹೊಳಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಎಸ್ ಐಟಿ ಅವರನ್ನು ಬಂಧಿಸುವ ತನಕ ಎಸ್ಐಟಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಹೇಳಿದ್ದಾರೆ.
ಡಿ.ಕೆ.ಶಿವಕುಮಾರ್ ಹೆಸರನ್ನು ತಂದು ಪ್ರಕರಣ ತಿರುಚುವ ಹುನ್ನಾರ ಜಾರಕಿಹೊಳಿ ಮಾಡುತ್ತಿದ್ದಾರೆ. ಜಾರಕಿಹೊಳಿ ಸರ್ಕಾರವನ್ನು ಬೀಳಿಸುತ್ತೇನೆ ಎಂದು ಬೆದರಿಕೆ ತಂತ್ರ ಅನುಸರಿಸುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಅಸಹಾಯಕರಾಗಿದ್ದಾರೆ ಎಂದವರು ಭಾನುವಾರ ಸುದ್ದಿ ಗೋಷ್ಠಿ ಯಲ್ಲಿ ಹೇಳಿದರು.