ಅಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಪ್ರತಿಭಟನೆ

RAICHUR
RAICHUR
Published on

 ರಾಯಚೂರು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ 1000 ರೂ.ಗಳನ್ನು ಹೆಚ್ಚಳ ಮಾಡಿದಂತೆ ಆಶಾ ಕಾರ್ಯಕರ್ತೆಯರಿಗೆ ಒಂದು ಸಾವಿರ ರೂ.ಗಳನ್ನು ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಬುಧವಾರ ಪ್ರತಿಭಟನೆ ಮಾಡಲಾಯಿತು.

60 ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ 5 ಲಕ್ಷ ರೂ, ಇಡಿಗಂಟು ನೀಡುವ ಕುರಿತು ನಿರ್ಣಯ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. 20 ಆಶಾಗಳಿಗೆ ಒಬ್ಬರಂತೆ ಸುಮಾರು 2000 ಸುಗಮಕಾರರಾಗಿ ಆಶಾಗಳಲ್ಲಿಯೇ ಒಬ್ಬರನ್ನು ಕಳೆದ 10 ವರ್ಷಗಳ ವರೆಗೆ ಕೆಲಸ ಪಡೆದುಕೊಂಡು ಏಕಾಏಕಿ ತೆಗೆದುಹಾಕಿರುವುದು ಖಂಡನೀಯವಾಗಿದ್ದು, 17 ವರ್ಷ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ನೀಡದೇ ಬೀದಿಗೆ ತಳ್ಳಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೊಂದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ದೊರಕಿಸಿಕೊಡಲು ಸಿಎಂ ಅವರೊಂದಿಗೆ ಆದ ತೀರ್ಮಾನಗಳಂತೆ ಸರ್ಕಾರದಿಂದ ಸ್ಪಷ್ಟ ಆದೇಶ ನೀಡುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.


ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಎನ್.ಎಸ್.ವೀರೇಶ, ಈರಮ್ಮ, ರಾಧಾ, ಮಹೇಶ ಚೀಕಲಪರ್ವಿ, ಲೆವಿನಾ, ಮಲ್ಲಮ್ಮ, ಲಕ್ಷ್ಮೀ, ದೇವಮ್ಮ, ಅಣ್ಣಪ್ಪ ಸೇರಿ ಅನೇಕರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net