ಕಾವೇರಿ ನದಿ ನೀರು ಉಳಿಸಲು ಮೈಸೂರಿನಲ್ಲಿ ಪ್ರತಿಭಟನೆ

Protest to save Kaveri river
Published on

ಮೈಸೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬಾರದು ಎಂದು ಒತ್ತಾಯಿಸಿ ಕಾವೇರಿ ಕ್ರಿಯಾ ಸಮಿತಿ ನಗರದ ಗಾಂಧಿಚೌಕ ಬಳಿ ಹಮ್ಮಿಕೊಂಡಿರುವ ಪ್ರತಿಭಟನೆ ಮುಂದುವರೆದಿದ್ದು, ಶನಿವಾರ ಮಾಜಿ ಶಾಸಕ ಎಲ್. ನಾಗೇಂದ್ರ ಪಾಲ್ಗೊಂಡು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

ರಾಜ್ಯದ ರೈತರ ಹಿತ ಕಾಪಾಡಲು ಸರ್ಕಾರ ವಿಫಲವಾಗಿದೆ. ಮಳೆಯ ಕೊರತೆಯಿಂದ ರಾಜ್ಯದಲ್ಲಿ ಬರಗಾಲ ಎದುರಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದು ಸರಿಯಲ್ಲ. ಕೂಡಲೇ ನೀರು ಹರಿಸುವುದನ್ನು ತಡೆಯಲು ಸರ್ಕಾರ ಕ್ರಮ ವಹಿಸಬೇಕು ಎಂದು ಎಲ್.ನಾಗೇಂದ್ರ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಮಿತಿ ಪದಾಧಿಕಾರಿಗಳಾದ ಮೂಗೂರು ನಂಜುಂಡಸ್ವಾಮಿ, ಮೆಲ್ಲಹಳ್ಳಿ ಮಹದೇವಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net