ಕಾಂಗ್ರೆಸ್ ಹಗರಣ ಮುಚ್ಚಿಟ್ಟುಕೊಳ್ಳಲು ಬಿಜೆಪಿ ಮೇಲೆ ಆರೋಪ

udp-5-bjp
Published on

ಉಡುಪಿ: ಕಾಂಗ್ರೆಸ್ ಅಭಿವೃದ್ಧಿ ಸಹಿಸುವುದಿಲ್ಲ. ನಿರಂತರ ಧಾರ್ಮಿಕ ಭಾವನೆ ಕೆರಳಿಸಿ ಹಿಂದುತ್ವವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ರಾಜ್ಯಸರ್ಕಾರದ ಹಗರಣಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಪರಶುರಾಮ ಥೀಂ ಪಾರ್ಕ್ ವಿಷಯವನ್ನು ಮುನ್ನೆಲೆಗೆ ತರುತ್ತದೆ ಎಂದು  ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು.

ಕಾಂಗ್ರೆಸ್ಸಿನ ದಬ್ಬಾಳಿಕೆ ರಾಜಕಾರಣವನ್ನು ವಿರೋಧಿಸಿ  ಸೋಮವಾರ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಕರಾವಳಿ ಸೃಷ್ಟಿಕರ್ತನ ಬಗ್ಗೆ ಕಾಂಗ್ರೆಸ್ಗೆ ಹೊಟ್ಟೆಕಿಚ್ಚು ಇದೆ. ದೇಶದ ಇತಿಹಾಸವನ್ನು ಅವರು ಒಪು$್ಪವುದಿಲ್ಲ ಎಂಬುದು ಅವರ ನಡವಳಿಕೆಯಿಂದ ಸಾಬೀತಾಗಿದೆ. ಪರಶುರಾಮ ಥೀಂ ಪಾರ್ಕ್ ಹೆಮ್ಮೆಯ ವಿಚಾರವಾಗಿದ್ದು, ಈ ವಿಚಾರದಲ್ಲಿ ನ್ಯಾಯ ದೊರಕಿಸಿಕೊಡಲಾಗುವುದು ಎಂದು ಹೇಳಿದರು.
ಕಾಂಗ್ರೆಸ್ನ ವಿವಿಧ ಹಗರಣಗಳ ಬಗ್ಗೆ ಬಿಜೆಪಿ ಪಾದಯಾತ್ರೆ ಆರಂಭಿಸುತ್ತಿದ್ದಂತೆ ಕಾಂಗ್ರೆಸ್ ಸರ್ಕಾರ ಕೂಡಲೇ ನಿರ್ಮಿತಿ ಕೇಂದ್ರದ ಅಧಿಕಾರಿಯನ್ನು ಅಮಾನತುಗೊಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರೊಂದಿಗೆ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಭಾಗವಹಿಸಿರುವುದು ಸಂಶಯಾತ್ಮಕ ನಡವಳಿಕೆಯಾಗಿದೆ ಎಂದು ಹೇಳಿದರು.

ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯ್ಕ್ ಮಾತನಾಡಿ, ಕಾರ್ಕಳದಲ್ಲಿ ದಿನನಿತ್ಯ ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳುಮೊಕದ್ದಮೆ ದಾಖಲಿಸಲಾಗುತ್ತಿದೆ. ಕಾಂಗ್ರೆಸ್ ವಿನಾಕಾರಣ ಪರಶುರಾಮನ ವಿಗ್ರಹದ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ. ಪರಶುರಾಮ ಪ್ರತಿಮೆ ನಿರ್ಮಿಸುತ್ತಿರುವ ಶಿಲ್ಪಿಯ ಮನೆಗೆ ತೆರಳಿ ಕಾಂಗ್ರೆಸ್ನ ಮುಖಂಡರು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ, ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಿರಣ್ ಕುಮಾರ್, ಜಯರಾಮ ಸಾಲ್ಯಾನ್, ಕಾರ್ಯದರ್ಶಿಗಳಾದ ರಾವೇಂದ್ರ ಕುಂದರ್, ಶ್ರೀಕಾಂತ್ ನಾಯಕ್, ಅನಿತಾ ಶ್ರೀಧರ್, ಉದಯ ಎಸ್.ಕೋಟ್ಯಾನ್, ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದಿಪ್ ರಾವ್, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು. ಪ್ರತಿಭಟನೆಯ ಬಳಿಕ ಬಿಜೆಪಿ ನಿಯೋಗ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅವರಿಗೆ ಪರಶುರಾಮ ಥೀಂ ಪಾರ್ಕ್ ವಿವಾದದ ಬಗ್ಗೆ ಸ್ಪಷ್ಟನೆ ನೀಡುವಂತೆ ಮನವಿ ಸಲ್ಲಿಸಿತು. ಈ ಪ್ರಕರಣ ಕೋರ್ಟ್ನಲ್ಲಿರುವುದರಿಂದ ಯಾವುದೇ ವಿಚಾರವನ್ನು ಹೇಳುವಂತಿಲ್ಲ. ಮನವಿ ಕೊಟ್ಟು ಹೋಗಿ, ಪರಿಶೀಲನೆ ನಡೆಸುತ್ತೇವೆ ಎಂದು ಡಿಸಿ ಉತ್ತರಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಕಾರ್ಯಕರ್ತರು ಪರಶುರಾಮ ಮೂರ್ತಿ ಪ್ರತಿಷ್ಠಾಪನೆ ಆಗಲೇಬೇಕು ಎಂದು ಘೋಷಣೆ  ಕೂಗಿದರು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net