ಅಡ್ಡದಾರಿಯಲ್ಲಿ ಸರ್ಕಾರ ಕೆಡವಲು ಬಿಜೆಪಿ ಪ್ರಯತ್ನ

udp-19-congress
Published on

ಉಡುಪಿ: ರಾಜ್ಯದ ಜನಪರ ಸರ್ಕಾರವನ್ನು ಅಡ್ಡದಾರಿಯಲ್ಲಿ ಕೆಡವಲು ಬಿಜೆಪಿ ವಿಫಲ ಪ್ರಯತ್ನಗಳನ್ನು ಮಾಡುತ್ತಿದೆ. ಜನರ ಸಂಕಷ್ಟಗಳನ್ನು ಅರಿತು ಗ್ಯಾರಂಟಿ ಯೋಜನೆಗಳ ಅನುಷ್ಠಾನಗೊಳಿಸಿ ಬಡವರ ಮನೆಗಳನ್ನು ಬೆಳಗಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡದಿದ್ದರೂ ಬಿಜೆಪಿ ರಾಜ್ಯಪಾಲರನ್ನು ಬಳಸಿಕೊಂಡು ಸಿಎಂ ಕೆಳಗಿಸಲು ನೋಡುತ್ತಿದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.

ಸೋಮವಾರ, ಬ್ರಹ್ಮಗಿರಿಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಜ್ಯಪಾಲರ ತೀರ್ಮಾನದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಕಚೇರಿಯನ್ನಾಗಿಸುವ ಪ್ರಯತ್ನ ಯಶಸ್ವಿಯಾಗಲು ನಾವು ಬಿಡುವುದಿಲ್ಲ. ನ್ಯಾಯಾಂಗದ ಮೇಲೆ ನಮಗೆ ಭರವಸೆ ಇದೆ ಎಂದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ, ಪ್ರತಿಭಟನೆಯನ್ನು ಬ್ಲಾಕ್ ಮತ್ತು ಗ್ರಾಮ ಮಟ್ಟದಲ್ಲೂ ನಡೆಸಲಾಗುವುದು ಎಂದು ಎಚ್ಚರಿಸಿದರು. ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಗೋಪಾಲ್ ಪೂಜಾರಿ, ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು, ಪ್ರಸಾದ್ ರಾಜ್ ಕಾಂಚನ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಹರೀಶ್ ಕಿಣಿ, ಪ್ರಖ್ಯಾತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಕಾಂಗ್ರೆಸ್ ಭವನದಿಂದ ಆರಂಭವಾದ ಪಾದಯಾತ್ರೆ ಜೋಡುಕಟ್ಟೆಯವರೆ ತೆರಳಿ, ವಾಪಸು ಬ್ರಹ್ಮಗಿರಿ ವೃತ್ತದಲ್ಲಿ ಸಮಾಪನವಾಯಿತು. ಜಿಲ್ಲೆಯ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net