ಅಸಹಜ ಸಾವು ಪ್ರಕರಣ ಪತ್ತೆಗೆ ಆಗ್ರಹ: ಮೇಣದ ಬತ್ತಿ ಹಿಡಿದು ಪ್ರತಿಭಟನೆ

Protest with candles Mandya
Published on

ಮಂಡ್ಯ: ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವುಗಳಿಗೆ ಸಂಬಂಧಿಸಿದಂತೆ ಹೊಸ ಸಾಕ್ಷಿ ಪರಿಗಣಿಸುವುದು ಹಾಗೂ ಎಸ್‌ಐಟಿ ತನಿಖೆ ಮುಂದುವರಿಸಲು ಸರ್ಕಾರ ಆದೇಶ ನೀಡಬೇಕು ಎಂದು ಆಗ್ರಹಿಸಿ ಜಾಗೃತ ಕರ್ನಾಟಕ ಮತ್ತು ಪ್ರಗತಿಪರ ಸಂಘಟನೆ ಮುಖಂಡರು ನಗರದಲ್ಲಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.

ಜೆ.ಸಿ.ವೃತ್ತದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಮೇಣದ ಬತ್ತಿ ಹಿಡಿದು ಸೌಜನ್ಯ ಪರವಾಗಿ ಘೋಷಣೆ ಕೂಗಿದರು.ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವುಗಳ ಬಗ್ಗೆ ಕೂಲಂಕುಶ, ಗಂಭೀರವಾದ ತನಿಖೆ ನಡೆಸಲು ಸರ್ಕಾರ ಸ್ಪಷ್ಟ ಆದೇಶ ನೀಡಬೇಕು. ಈ ಪ್ರಕರಣಗಳಲ್ಲಿ ತಪ್ಪಿಸಿಕೊಂಡಿರುವ ಅಪರಾಧಿಗಳನ್ನು ಪತ್ತೆಹಚ್ಚಲು ಸಮಗ್ರ ತನಿಖೆ ಕೈಗೊಳ್ಳುವಂತೆ ಎಸ್‌ಐಟಿಗೆ ಸ್ಪಷ್ಟ ಆದೇಶ ನೀಡಬೇಕು. ಇಲ್ಲಿ ಏನಾದರೂ ತಾಂತ್ರಿಕ ಅಡಚಣೆಗಳಿದ್ದರೆ ಸೂಕ್ತ ರೀತಿಯಲ್ಲಿ ನಿವಾರಿಸಿಕೊಳ್ಳಬೇಕು. ಇದು ಸರ್ಕಾರದ ಜವಾಬ್ದಾರಿ ಎನ್ನುವುದನ್ನು ಮರೆಯಬಾರದು ಎಂದು ಒತ್ತಾಯಿಸಿದರು.

ಮುಖಂಡರಾದ ಎನ್.ನಾಗೇಶ್, ಪೃಥ್ವಿರಾಜ್, ಜಗದೀಶ್, ಸಂತೋಷ್, ಸುಬ್ರಹ್ಮಣ್ಯ, ಪ್ರಜ್ವಲ್, ಹರೀಶ್, ಬಿ.ಎಸ್.ಶಿಲ್ಪಾ, ಪೂರ್ಣಿಮಾ, ಹುರುಗಲವಾಡಿ ರಾಮಯ್ಯ, ಕೃಷ್ಣಪ್ರಕಾಶ್, ಶ್ರುತಿ ಭಾಗವಹಿಸಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net