ಕಾವೇರಿ ನೀರಿಗಾಗಿ ಖಾಲಿ ಬಿಂದಿಗೆ ಜತೆ ಪ್ರತಿಭಟನೆ

4
Published on

ರಾಜ್ಯ ಸರ್ಕಾರ ಕಬಿನಿ, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿ ರೈತರಿಗೆ ದ್ರೋಹ ಬಗೆದಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ಕನ್ನಡಪರ ಸಂಘಟನೆಗಳ ಸದಸ್ಯರು ಬುಧವಾರ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರಲ್ಲದೆ, ಕಾಡಾ ಕಚೇರಿಯಲ್ಲಿರುವ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಗನ್‌ಹೌಸ್‌ನಲ್ಲಿರುವ ಕುವೆಂಪು ಉದ್ಯಾನವನದಲ್ಲಿ ಸಭೆ ನಡೆಸಿ ಬಳಿಕ ಮೆರವಣಿಗೆ ಮೂಲಕ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಕಚೇರಿಗೆ ತೆರಳಿ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಡೆಪ್ಯೂಟಿ ಚೀಫ್ ಇಂಜಿನಿಯರ್ ರಂಗನಾಥ್ ಸ್ಥಳಕ್ಕಾಗಮಿಸಿ ಈಗಾಗಲೇ ಕಬಿನಿ, ಕಾವೇರಿಯಿಂದ ಬಿಡುತ್ತಿರುವ ನೀರನ್ನು ಕಡಿಮೆ ಮಾಡಿದ್ದೇವೆ. ನಿಮ್ಮ ಹೋರಾಟದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ರೈತ ಮುಖಂಡ ಮೀಸೆ ಮಂಜಣ್ಣ, ಅತ್ತಳಿ ದೇವರಾಜ್, ಸೋಮಶೇಖರ್, ಬರಡನಪುರ ನಾಗರಾಜು, ಹಳ್ಳಿಕೆರೆಹುಂಡಿ ಭಾಗ್ಯರಾಜ್, ಕಿರಗಸೂರು ಶಂಕರ, ಕಮಲಮ್ಮ, ಸಿದ್ದೇಶ, ವೆಂಕಟೇಶ, ರವಿ, ಕನ್ನಡ ಸಂಘಟನೆಗಳ ಮಂಜುನಾಥ್, ಆಮ್ ಆದ್ಮಿ ಪಕ್ಷದ ಮೋಹನ್ ದಾಸರಿ ಕುಶಾಲಸ್ವಾಮಿ, ನಂಜಪ್ಪ, ಕಾಳೇಗೌಡ, ಮಾಳವಿಕಾ, ರಂಗಯ್ಯ, ರಾಜಶ್ರೀ, ಸಿದ್ದರಾಜು ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net