

ಚಿಕ್ಕಮಗಳೂರು: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದ ಹನುಮಂತಪ್ಪ ಸರ್ಕಲ್‌ನಲ್ಲಿ ಭನುವಾರ ಕಿವಿಗೆ ಹೂವು ಮುಡಿದು, ಕೈಯಲ್ಲಿ ಚಿಪ್ಪನ್ನು ಹಿಡಿಡು, ವಾಹನ ಸವಾರರಿಗೆ ಚಿಪ್ಪನ್ನು ತೋರಿಸಿ ಹಾಗೂ ಹೂವನ್ನು ನೀಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ರಾಜ್ಯದ ಜನರ ಕೈಗೆ ಚಿಪ್ಪನ್ನು ನೀಡಿದೆ. ಒಮ್ಮೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾದಾಕ್ಷಣ ದಿನಬಳಕೆ ವಸ್ತುಗಳು ಸೇರಿದಂತೆ ಎಲ್ಲ ವಸ್ತುಗಳ ಬೆಲೆಯೂ ಏರಿಕೆಯಾಗುತ್ತದೆ. ಬೆಲೆ ಏರಿಕೆ ಮೂಲಕ ರಾಜ್ಯ ಜನರನ್ನು ಸುಲಿಗೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಹನುಮಂತಪ್ಪ ಸರ್ಕಲ್ ಹಾಗೂ ಪಕ್ಕದಲ್ಲೇ ಇರುವ ಪೆಟ್ರೋಲ್ ಬಂಕ್‌ಗೆ ತೆರಳಿದ ಬಿಜೆಪಿ ಕಾರ್ಯಕರ್ತರು ವಾಹನ ಸವಾರರಿಗೆ ಚಿಪ್ಪು ತೋರಿಸಿ ಹೂವು ನೀಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ರಾಜ್ಯ ಸರ್ಕಾರ ಬೆಲೆ ಏರಿಕೆ ಮೂಲಕ ಜನರ ಕಿವಿಗೆ ಹೂವು ಮುಡಿಸಿ, ಕೈಗೆ ಚಿಪ್ಪು ಕೊಟ್ಟಿದೆ. ಆದನ್ನೇ ಜನರಿಗೆ ತಿಳಿಸುವ ಕೆಲಸವನ್ನು ಇಂದಿನ ಪ್ರತಿಭಟನೆಯಲ್ಲಿ ಮಾಡುತ್ತಿz್ದೆÃವೆ. ಭ್ರಷ್ಟಾಚಾರ ಮಾಡಿ, ಬೆಲೆಏರಿಕೆಯನ್ನು ಮಾಡಲಾಗುತ್ತಿದೆ. ಈ ವಿಷಯಗಳನ್ನು ಮರೆಮಾಚಲು ಇನ್ನಾವುದೋ ವಿಚಾರಗಳನ್ನು ಮುನ್ನಲೆಗೆ ತರಲು ಯತ್ನಿಸುವುದೇ ಕಾಂಗ್ರೆಸ್ ಕೆಲಸ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಬೇಕು. ಇಲ್ಲದಿದ್ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನದಿಂದ ಕೆಳಗೆ ಇಳಿಯಬೇಕು. ಈ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ೨ ಬಾರಿ ವಿದ್ಯುತ್ ದರ ಏರಿಸಿ ಜನರಿಗೆ ಬರೆ ಹಾಕಿದರು. ಈಗ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಹೆಚ್ಚಿಸಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ಸೆಸ್ ಅತೀ ಹೆಚ್ಚಾಗಿದೆ. ಇದು ಜನರ ಕಿವಿಗೆ ಚೆಂಡು ಹೂವು ಮುಡಿಸುವ ಕೆಲಸ. ಜನರ ಮೇಲೆ ಸೇಡು ತೀರಿಸಿಕೊಳ್ಳುವ ಕೆಲಸ ಎಂದು ದೂರಿದರು.
ಜನ ವಿರೋಧಿಯಾಗಿರುವ ಈ ಸರ್ಕಾರದ ನೀತಿಯನ್ನು ಜನ ಮನಕ್ಕೆ ಮುಟ್ಟಿಸುವ ಸಲುವಾಗಿ ಯುವ ಮೋರ್ಚಾ ವತಿಯಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಲೆ ಏರಿಕೆ ಇಳಿಸದೇ ಇದ್ದಲ್ಲಿ ಅವರನ್ನು ಇಳಿಸಲು ಏನು ಮಾಡಬೇಕು ಅದನ್ನು ನಾವು ಮಾಡುತ್ತೇವೆ ಬೆಲೆ ಏರಿಕೆ ಖಂಡಿಸಿ ಇದೇ ಕಾಂಗ್ರೆಸಿಗರು ಸ್ಕೂಟಿಯ ಶವ ಯಾತ್ರೆ ಮಾಡಿದ್ದರು. ಈಗ ಅವರz್ದÉÃ ಸರ್ಕಾರ ಬಂದ ಮೇಲೆ ಪೆಟ್ರೋಲ್, ಡೀಸೆಲ್ ಅಷ್ಟೇ ಅಲ್ಲದೆ, ಅಬಕಾರಿ ಸುಂಕ ಎರಡು ಬಾರಿ ಹೆಚ್ಚಿಸಿದ್ದಾರೆ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದರು. ಪಹಣಿ, ಆದಾಯ ದೃಢೀಕರಣ ಪತ್ರ, ಜನನ, ಮರಣ ದೃಢೀಕರಣ ಪತ್ರದ ಬೆಲೆಯನ್ನೂ ಹೆಚ್ಚಿಸಿದ್ದಾರೆ. ಈ ಮೂಲಕ ಜನರ ಕಿವಿಗೆ ಹೂವು ಮುಡಿಸುವ ಜೊತೆಗೆ ಕೈಗೆ ಚಿಪ್ಪನ್ನೂ ಕೊಟ್ಟಿದ್ದಾರೆ ಎಂದು ಟೀಕಿಸಿದರು.
ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಮಾತನಾಡಿ, ಬೆಲೆ ಏರಿಕೆಯನ್ನು ಹೇರುವ ಮೂಲಕ ಕಾಂಗ್ರೆಸ್ ದುರಾಡಳಿತ ನಡೆಸುತ್ತಿದೆ. ವಾಲ್ಮೀಕಿ ನಿಗಮದಲ್ಲಿ ನಡೆದ ಭಾರೀ ಭ್ರಷ್ಟಾಚಾರವನ್ನು ಮರೆ ಮಾಚುವ ಸಲುವಾಗಿ ಬೆಲೆ ಏರಿಕೆಯನ್ನು ಜನರ ಮುಂದೆ ತಂದು ಗಮನ ಬೇರೆಡೆಗೆ ಹರಿಸುವಂತೆ ಷಡ್ಯಂತ್ರ ನಡೆಸಿದೆ ಎಂದು ದೂರಿದರು.
ಗ್ಯಾರಂಟಿ ಹೆಸರಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ೬ನೇ ಗ್ಯಾರಂಟಿಯಾಗಿ ಪೆಟ್ರೋಲ್, ಡೀಸೆಲ್ ದರ ಏರಿಸಿ ಜನರ ಕೈಗೆ ಚಿಪ್ಪು ನೀಡಿದೆ. ಏಳನೇ ಗ್ಯಾರಂಟಿಯಾಗಿ ಚೊಂಬು ನೀಡಲಿದೆ. ಇದು ಚಿಪ್ಪು, ಚೊಂಬಿನ ಸರ್ಕಾರವಾಗಿದೆ. ತಕ್ಷಣ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಯುವ ಮೋರ್ಚಾ ನಗರ ಯುವ ಮೋರ್ಚಾ ಅಧ್ಯಕ್ಷ ಜೀವನ್ ಕೋಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಚಿನ್ ಗೌಡ, ಜಿಲ್ಲಾ ಉಪಾಧ್ಯಕ್ಷೆ ಅಂಕಿತಾ ಗೌಡ, ಪುನೀತ್, ಪಾರ್ತಿಬನ್, ಮುಖಂಡರಾದ ಟಿ.ರಾಜಶೇಖರ್, ಮಧುಕುಮಾರ ರಾಜ್ ಅರಸ್, ಓಂಕಾರೇಗೌಡ ಮತ್ತಿತರರಿದ್ದರು.